Advertisement

ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಧು ಬಂಗಾರಪ್ಪ: ಬೆಂಗಲಿಗರ ಸಂಭ್ರಮಾಚರಣೆ

11:56 AM Jul 30, 2021 | Team Udayavani |

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ದಿ.ಎಸ್.ಆರ್. ಬಂಗಾರಪ್ಪ ಅವರ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಇಂದು ಜೆಡಿಎಸ್ ಪಕ್ಷ ತ್ಯಜಿಸಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

Advertisement

ಹುಬ್ಬಳ್ಳಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.

ಇದನ್ನೂ ಓದಿ:ಉಪ ಮುಖ್ಯಮಂತ್ರಿಯನ್ನಾದರೂ ಮಾಡಲಿ : ಮಾಜಿ ಸಚಿವ ಈಶ್ವರಪ್ಪ

ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಮಧು ಬಂಗಾರಪ್ಪ ಅವರ ಸಾವಿರಾರು ಬೆಂಬಲಿಗರು ಹಾಜರಿದ್ದರು.

ಸಂಭ್ರಮಾಚರಣೆ

Advertisement

ಶಿವಮೊಗ್ಗ: ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಗೆ ಸೇರ್ಪಡೆಯಾದ ಹಿನ್ನೆಲೆ ತವರು ಕ್ಷೇತ್ರ ಸೊರಬದಲ್ಲಿ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಯಿತು. ಸೊರಬಾ ಪುರಸಭೆ ಸದಸ್ಯ ಪ್ರಸನ್ನಕುಮಾರ್ ದೊಡ್ಮನೆ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆದಿದ್ದು, ಅಭಿಮಾನಿಗಳು ಸೊರಬದ ಶ್ರೀ ರಂಗನಾಥ ಹಾಗೂ ದುರುಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸೊರಬದ ಅಂಬೇಡ್ಕರ್ ಬಡಾವಣೆ, ಆಟೋಸ್ಟ್ಯಾಂಡ್ ಹಾಗೂ ರಂಗನಾಥ ದೇವಾಲಯದ ಮುಂದೆ ಹಾಲು ವಿತರಣೆ ನಡೆಯಿತು. ಪಟ್ಟಣದಲ್ಲಿ ಪಟಾಕಿ ಸಿಡಿಸಿ, ಸಿಹಿ- ಹಾಲು ಹಂಚಿ ಕಾರ್ಯಕರ್ತರ ಸಂಭ್ರಮ ವ್ಯಕ್ತಪಡಿಸಿದರು. ಪುರಸಭಾ ಸದಸ್ಯರಾದ ಮೆಹಬೂಬ್ ಬಾಷಾ, ಸಿರಾಜುದ್ದೀನ್, ನಾಗರಾಜ್, ಶೋಭಾ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next