Advertisement

ಧಾರ್ಮಿಕ ಮತಾಂತರಕ್ಕೆ ಹೆದರಿ ತಂಜಾವೂರಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ

12:25 PM Jan 31, 2022 | Team Udayavani |

ಚೆನ್ನೈ: ತಂಜಾವೂರಿನ ವಿದ್ಯಾರ್ಥಿನಿ ಸಾವಿನ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಸೋಮವಾರ ಆದೇಶ ನೀಡಿದೆ.

Advertisement

ಶಾಲಾ ಬಾಲಕಿ ಧಾರ್ಮಿಕ ಮತಾಂತರಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ವಿವಾದಾತ್ಮಕ ವಿಡಿಯೋ ಚಿತ್ರೀಕರಿಸಿದ ವ್ಯಕ್ತಿ ಪೊಲೀಸ್ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠಕ್ಕೆ ರಾಜ್ಯ ಸರ್ಕಾರ ತಿಳಿಸಿತ್ತು.

ಬಾಲಕಿಯ ಪೋಷಕರ ಪರ ವಕೀಲರು ನ್ಯಾಯಾಧೀಶರಿಗೆ ಪೊಲೀಸ್ ತನಿಖೆಯಲ್ಲಿ ನಂಬಿಕೆಯಿಲ್ಲ ಎಂದು ಹೇಳಿದ್ದರು ಮತ್ತು ಬಾಹ್ಯ ಏಜೆನ್ಸಿಯಿಂದ ತನಿಖೆಯನ್ನು ಕೋರಿದ್ದರು.

ವಿದ್ಯಾರ್ಥಿನಿ ಆತ್ಮಹತ್ಯೆ ತಮಿಳುನಾಡಿನಲ್ಲಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿದ್ದು, ವಿದ್ಯಾರ್ಥಿನಿ ಕ್ರಿಶ್ಚಿಯನ್ ಮಿಷನರಿ ಶಾಲೆಯಲ್ಲಿ ಓದುತ್ತಿದ್ದು, ಆಕೆ ಮೂಲತಃ ಅರಿಯಲೂರು ಜಿಲ್ಲೆಯವಳಾಗಿದ್ದು, ಶಾಲೆಯ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಳು. ಬಾಲಕಿಯನ್ನು ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಹಾಸ್ಟೆಲ್‌ನಲ್ಲಿ ಮನೆಕೆಲಸಗಳನ್ನು ಮಾಡಲು ಬಲವಂತಪಡಿಸಲಾಗಿದೆ ಎಂದು ಆರೋಪಿಸಿ ಆಕೆಯ ಪೋಷಕರು ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅದನ್ನು ಸಮರ್ಥಿಸುವ ವೀಡಿಯೊ ಕ್ಲಿಪ್ ಹೊರಬಂದಿವೆ.

Advertisement

Udayavani is now on Telegram. Click here to join our channel and stay updated with the latest news.

Next