Advertisement

ಸುಪ್ರೀಂ ಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶವಿಲ್ಲ: ಮಾಧುಸ್ವಾಮಿ

11:06 PM Nov 14, 2020 | sudhir |

ಚಿಕ್ಕಮಗಳೂರು: ರಾಜ್ಯಗಳ ಹೈಕೋರ್ಟ್‌ ತೀರ್ಪುಗಳು ಇಂಗ್ಲಿಷ್‌ನಲ್ಲಿಯೇ ಇರಬೇಕೆಂಬುದು ಸುಪ್ರೀಂಕೋರ್ಟ್‌ ಆದೇಶವಾಗಿದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಕನ್ನಡದಲ್ಲೇ ತೀರ್ಪು ನೀಡಬೇಕೆಂದು ಸರಕಾರ ಮೂಗು ತೂರಿಸಲು ಬರುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕರ್ನಾಟಕದ ನ್ಯಾಯಾ ಧಿಧೀಶರಿಗೆ ಮಾತ್ರ ಸಂಬಂಧಿಸಿದ್ದಲ್ಲ, ಬೇರೆ ರಾಜ್ಯದ ನ್ಯಾಯಾಧಿಧೀಶರು ರಾಜ್ಯಕ್ಕೆ ವರ್ಗಾವಣೆಯಾಗಬಹುದು ಎಂದು ತೀರ್ಮಾನಿಸಿ ಹೈಕೋರ್ಟ್‌ ವ್ಯವಹಾರ ಇಂಗ್ಲಿಷ್‌ನಲ್ಲಿ ಆಗಬೇಕೆಂದು ಸುಪ್ರೀಂ ಕೋರ್ಟ್‌ ಹೇಳಿದ್ದು ಈ ವಿಚಾರದಲ್ಲಿ ನಾನು ಏನೂ ಹೇಳಲು ಸಾಧ್ಯವಿಲ್ಲ ಎಂದರು.

ಪೊಲೀಸ್‌ ಠಾಣೆಗಳಲ್ಲಿ ಝೀರೋ ಎಫ್‌ಐಆರ್‌ ಕಾನೂನಿದ್ದರೂ ಪಾಲಿಸು ತ್ತಿಲ್ಲ ಎಂಬ ದೂರುಗಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಿರ್ದಿಷ್ಟ ದೂರುಗಳಿದ್ದಲ್ಲಿ ಸಂಬಂಧ ಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next