ಮದ್ದೂರು: ತಾಲೂಕಿನ ಬೆಸಗರಹಳ್ಳಿ ಜಿಪಂವ್ಯಾಪ್ತಿಯ ನಿಲುವಾಗಿಲು, ಹೊಸಕೆರೆ, ಬೆಸಗರಹಳ್ಳಿಗ್ರಾಪಂ ವ್ಯಾಪ್ತಿಗಳಲ್ಲಿ ಜಿ.ಪಂ. ಹಾಗೂ ತಾ.ಪಂ.ಚುನಾವಣೆ ಸಂಬಂಧ ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಜರುಗಿತು.
ತಾಲೂಕಿನ ಹೊಸಕೆರೆ ಗ್ರಾಮದಲ್ಲಿ ಕಾಂಗ್ರೆಸ್‌ಕಾರ್ಯಕರ್ತರ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಸ್ತಿತ್ವ ಕಳೆದುಕೊಳ್ಳಲಿದ್ದು,ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿರುವುದಾಗಿವಿಶ್ವಾಸ ವ್ಯಕ್ತಪಡಿಸಿದರು.
ಈಗಿನಿಂದಲೇ ಪ್ರತಿ ಗ್ರಾಮದಲ್ಲಿ ಪಕ್ಷ ಸಂಘಟಿಸುವ ಜತೆಗೆ ಸ್ಥಳೀಯ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಕಾರ್ಯ ಯೋಜನೆ ರೂಪಿಸಿಪಕ್ಷವು ಯಾರನ್ನೇ ಅಭ್ಯರ್ಥಿಯನ್ನಾಗಿಸಿದರೂತಮ್ಮ ಭಿನ್ನಾಭಿಪ್ರಾಯ ಹಾಗೂ ಮನಸ್ತಾಪಬದಿಗೊತ್ತಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆನಿರಂತರವಾಗಿ ಶ್ರಮಿಸಬೇಕೆಂದರು.ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರುರಾಮಕೃಷ್ಣ ಮಾತನಾಡಿ, ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯಾದ್ಯಂತ ಪ್ರವಾಸಕೈಗೊಂಡು ಪಕ್ಷವನ್ನು ಅಧಿಕಾರಕ್ಕೆ ತರಲು ಮುಂದಾಗಿದ್ದಾರೆ ಎಂದರು. ಜಿಪಂ ಹಾಗೂ ತಾಪಂಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಲುಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆಆಯೋಜಿಸಿ ಮಾಹಿತಿ ಸಂಗ್ರಹಿಸುತ್ತಿದ್ದು, ಕಾರ್ಯಕರ್ತರು ಸೂಚಿಸುವ ವ್ಯಕ್ತಿಗೆ ಬಿ ಫಾರಂನೀಡುವುದಾಗಿ ಹೇಳಿದರು.
ಕಾಂಗ್ರೆಸ್ ಮುಖಂಡರಾದ ಚಿಕ್ಕಬೋರಯ್ಯ, ಗೋಪಿ, ದೊಡ್ಡರಾಮಣ್ಣ,ಸತೀಶ್ ಇದ್ದರು.