Advertisement

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

03:12 PM Aug 24, 2024 | Team Udayavani |

ಮಾಗಡಿ: ಯುವ ವಕೀಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ.

Advertisement

ಯುವ ವಕೀಲೆ ವಾಸುಕಿ (25) ಸಾವಿಗೆ ಶರಣಾದವರು.

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವ ವಕೀಲೆ ವಾಸುಕಿ ಮಾಗಡಿಯ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

ಈ ಸಂಬಂಧ ಮಾಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇತ್ತೀಚಿಗೆ ಯುವತಿಗೆ ಮದುವೆ ನಿಶ್ಚಯವಾಗಿತ್ತು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next