ಮಾಗಡಿ: ಹೇಮಾವತಿ ಕುಡಿಯುವ ನೀರಿಗಾಗಿ ಹೋರಾಟ ಮಾಡುತ್ತಿದ್ದ ಹಸಿರು ಸೇನೆ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವರು ರೈತರನ್ನು ಪೊಲೀಸರು ಬಂಧಿಸಿದರು.
ತಾಲೂಕಿನ ತಾಳೇಕೆರೆ ಹ್ಯಾಂಡ್ ಪೋಸ್ಟ್ ನಲ್ಲಿ ಹಸಿರು ಸೇನೆ ರೈತಸಂಘದ ತಾಲೋಕು ಅಧ್ಯಕ್ಷ ಗೋವಿಂದರಾಜು ನೇತೃತ್ವದಲ್ಲಿ ವಿವಿಧ ಮಠಾಧ್ಯಕ್ಷರ ಸಾನಿಧ್ಯದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ರಸ್ತೆ ತಡೆ ನಡೆಸಲು ಮುಂದಾದ ಕೋಡಿಹಳ್ಳಿ ಚಂದ್ರಶೇಖರ್, ಜಿಲ್ಲಾಧ್ಯಕ್ಷ ಬೈರೇಗೌಡ, ತಾಲೋಕು ಅಧ್ಯಕ್ಷ ಗೋವಿಂದ ರಾಜು ಇತರರು ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆಯಲು ಮುಂದಾದಾಗ ಪ್ರತಿಭಟನಾಕಾರರನ್ನು ಪೊಲೀಸರು ತಡೆದು ರಿಸರ್ವ್ ಪೊಲೀಸ್ ವಾಹನಕ್ಕೆ ತುಂಬಿ ಬಂಧಿಸಿದರು.
ಇದೇ ವೇಳೆ ನೂರಾರು ರೈತರು ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಸರಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕುಡಿಯುವ ನೀರಿಗಾಗಿ ಹೋರಾಟ ಮಾಡುತ್ತಿದ್ದ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದುಖಂಡನೀಯ ಕೂಡಲೇ ಸರಕಾರ ಮಧ್ಯ ಪ್ರವೇಶಿಸಿ ಸಮನ್ವಯ ಸಭೆ ನಡೆಸಿ ತಾಲೂಕಿಗೆ ಹೇಮಾವತಿ ನೀರನ್ನು ಹರಿಸಬೇಕು. ಪ್ರತಿಭಟನಾಕಾರರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಗದ್ದುಗೆ ಮಠದ ಮಹಂತಸ್ವಾಮೀಜಿ, ಜಗಣಯ್ಯ ಮಠದ ಚನ್ನಬಸವ ಸ್ವಾಮೀಜಿ, ಬಂಡೇಮಠದ ಮಹಲಿಂಗಸ್ವಾಮೀಜಿ ಸರಕಾರವನ್ನು ಒತ್ತಾಯಿಸಿದರು.
ರೈತಸಂಘದ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ಬಂಧನ ರಸ್ತೆ ತಡೆ ಹೋರಾಟದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಮುನ್ನೆಚರಿಕೆ ಕ್ರಮ ವಹಿಸಿದ ಡಿವೈಎಸ್ಪಿ ಪ್ರವೀಣ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಯಿತು ಯಾವುದೆ ಅಹಿತಕರ ಘಟನೆ ನಡೆದಿರುವ ಬಗ್ಗೆ ವರದಿಯಾಗಿಲ್ಲ.