Advertisement

ಕ್ರೀಡೆಗಳಲ್ಲಿ ಗೆಲ್ಲುವ ವಿಶ್ವಾಸ ಬೆಳೆಸಿಕೊಳ್ಳಿ

04:53 PM Sep 19, 2019 | Team Udayavani |

ಮಾಗಡಿ: ಕ್ರೀಡೆಗಳು ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಕ್ರೀಡೆಗಳಲ್ಲಿ ಭಾಗವಹಿಸಿ, ಗೆಲ್ಲುವ ವಿಶ್ವಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಶಾಸಕ ಎ.ಮಂಜುನಾಥ್‌ ತಿಳಿಸಿದರು.

Advertisement

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಕ್ರೀಡಾಕೂಟದಲ್ಲಿ ಜ್ಯೋತಿ ಸ್ವೀಕರಿಸಿದ ಅವರು ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸ್ಪರ್ಧಿಸಿ, ಉತ್ತಮ ಸಾಧನೆಗೆ ದೈಹಿಕ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ದೈಹಿಕ ಶಿಕ್ಷಕರ ಶ್ರಮವನ್ನು ಮಕ್ಕಳು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕಿದೆ. ಈ ಮೂಲಕ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಬೇಕು. ಹೆಚ್ಚು ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಪೋಷಕರಿಗೆ ಮತ್ತು ಶಾಲೆಗೆ ಕೀರ್ತಿ ತರುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು.

ನೌಕರರ ಸಂಘಕ್ಕೆ ಜಮೀನು ಗುರುತಿಸಿ: ಪಟ್ಟಣದಲ್ಲಿ ಸರ್ಕಾರಿ ನೌಕರರ ಸಂಘದ ಕಟ್ಟಡಕ್ಕೆ ನಿರ್ಮಾಣಕ್ಕಾಗಿ ಕನಿಷ್ಠ ಅರ್ಧ ಎಕರೆಯಷ್ಟು ಸೂಕ್ತ ಜುಮೀನು ಗುರುತಿಸಲು ತಹಶೀಲ್ದಾರ್‌ ಅವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮಕ್ಕಳ ಆರೋಗ್ಯಕ್ಕೆ ಪ್ರಮುಖ್ಯತೆ ನೀಡಿ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌. ಸಿದ್ದೇಶ್ವರ್‌ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಶಕ್ತಿಯನ್ನು ಹೆಚ್ಚಿಸುತ್ತದೆ. ದೇಹವು ಸದೃಢಗೊಳ್ಳುವುದರ ಜೊತೆಗೆ ಆರೋಗ್ಯದಿಂದ ಇರಬಹುದು. ಈ ದೇಶದ ಆಸ್ತಿ ವಿದ್ಯಾರ್ಥಿಗಳು, ಅವರ ಆರೋಗ್ಯಕ್ಕೆ ಹೆಚ್ಚಿನ ಪ್ರಮುಖ್ಯತೆ ಸರ್ಕಾರ ನೀಡುತ್ತಿದೆ ಎಂದರು.

ಈ ವೇಳೆ ಶಾಸಕ ಎ.ಮಂಜುನಾಥ್‌ ಅವರು ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

Advertisement

ಈ ಸಂದರ್ಭದಲ್ಲಿ ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕಾಧಿಕಾರಿ ಟಿ.ಪ್ರದೀಪ್‌, ತಾಪಂ ಸದಸ್ಯ ಎಂ.ಜಿ.ನರಸಿಂಹಮೂರ್ತಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಜಿ.ಶಿವರಾಮಯ್ಯ, ಕಾರ್ಯಾಧ್ಯಕ್ಷ ಪ್ರಕಾಶ್‌, ಗ್ರಾಪಂ ಸದಸ್ಯ ರಘು, ಮುಖಂಡ ಕಲ್ಕೆರೆ ಶಿವಣ್ಣ, ದೈಹಿಕ ಶಿಕ್ಷಣ ಪರಿವೀಕ್ಷಕ ಸಿ.ಬಿ. ಅಶೋಕ್‌, ಶಿಕ್ಷಕ ಮಲ್ಲೂರು ಲೋಕೇಶ್‌, ಎಂ.ಎನ್‌.ಜಯರಾಮ್‌, ಕೆ.ಪಿ. ರಂಗಸ್ವಾಮಿ, ಮಲ್ಲಿಕಾರ್ಜುನಸ್ವಾಮಿ, ಲೋಕೇಶ್‌, ದೈಹಿಕ ಶಿಕ್ಷಕರಾದ ಆರ್‌.ಬಿ.ಅರಸನಾಳ್‌, ಹನುಮಂತಪ್ಪ, ವೆಂಕಟೇಶ್‌, ದಯಾನಂದ್‌, ನರಸಿಂಹಮೂರ್ತಿ, ಸಿದ್ದೇಶ್‌, ರವಿ ಕುಮಾರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next