ಮೈಸೂರು: ಶಿವಮೊಗ್ಗ ಸೇರಿ ಎಲ್ಲ ಬಂಡಾಯವು ಬಗೆಹರಿಯಲಿದ್ದು ಇನ್ನು ನಾಲ್ಕೇ ದಿನದಲ್ಲಿ ಆ ಮ್ಯಾಜಿಕ್ ಆಗುತ್ತೆ ನೋಡ್ತಾ ಇರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬುಧವಾರ ಮುಂಜಾನೆ ಪಕ್ಷದ ಮುಖಂಡರೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಪ್ರತಿಕ್ರಿಯಿಸಿ, ಟಿಕೆಟ್ ವಿಚಾರವಾಗಿ ಕೆಲವೆಡೆ ಬಂಡಾಯವಿದೆ. ಇದು ನಾಲ್ಕು ದಿನಗಳಲ್ಲಿ ಬಗೆಹರಿಯಲಿದೆ ಎಂದರು.
ಪಕ್ಷದ ಎಲ್ಲ ನಿರ್ಧಾರಗಳನ್ನು ವಿಜಯೇಂದ್ರ, ಯಡಿಯೂರಪ್ಪ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪಕ್ಷದ ಹೈಕಮಾಂಡ್ ನಿರ್ಧಾರಗಳೇ ಅಂತಿಮ. ಪಕ್ಷ ನಮ್ಮ ಮಾತುಗಳನ್ನು° ಕೇಳಿಕೊಂಡು ಎಲ್ಲವನ್ನೂ ನಿರ್ಧಾರ ಮಾಡುತ್ತಿಲ್ಲ. ಪಕ್ಷದ ಹೈಕಮಾಂಡ್‌ಗೆ ಮತ್ತು ನಾಯಕರಿಗೆ ಎಲ್ಲವೂ ಗೊತ್ತಿದೆ. ಹೀಗಾಗಿ ಖುದ್ದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರೇ ಎಲ್ಲ ಕಡೆ ಹೋಗಿ ಭಿನ್ನಮತ ಶಮನ ಮಾಡುತ್ತಾರೆ ಎಂದರು.
ಬಿಜೆಪಿಯ ಪ್ರಮುಖರಿಗೆ ಕಾಂಗ್ರೆಸ್ ಗಾಳ ಹಾಕುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಬಡವರು, ಶೋಷಿತರು, ರೈತರು ಸೇರಿ ಯಾರ ಪರವಾಗಿಯೂ ಈ ಸರ್ಕಾರ ಇಲ್ಲ. ಇದರಿಂದ ಜನರು ಬೇಸತ್ತಿದ್ದಾರೆ. ಹೀಗಾಗಿ ನಮ್ಮ ಪಕ್ಷದ ಮುಖಂಡರನ್ನು ಸೆಳೆಯುವ ಕೆಲಸ ಮಾಡುತ್ತಿ¨ªಾರೆ ಎಂದು ಕಿಡಿಕಾರಿದರು.
ಬಿಜೆಪಿ-ಜೆಡಿಎಸ್ ಮೈತ್ರಿಯಾಗಿರುವುದು ಕಾಂಗ್ರೆಸ್‌ಗೆ ಪ್ಲಸ್ ಆಗಲಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾವುದು ಪ್ಲಸ್, ಯಾವುದು ಮೈನಸ್ ಎಂಬುದನ್ನು ಜನ ತೀರ್ಮಾನಿಸುತ್ತಾರೆ. ಚುನಾವಣೆಯಲ್ಲಿ ಸೋಲುವ ಭಯದಿಂದ ಕಾಂಗ್ರೆಸ್‌ನವರು ಈ ರೀತಿಯಾಗಿ ಹೇಳಿಕೆ ಕೊಡುತ್ತಿ¨ªಾರೆ. ನಾವೆಲ್ಲರೂ ಸಮನ್ವಯತೆಯಿಂದಲೇ ಚುನಾವಣೆ ಮಾಡುತ್ತಿದ್ದೇವೆ ಎಂದರು.
ಮಂಗಳವಾರ ರಾತ್ರಿಯೇ ಮೈಸೂರಿಗೆ ಆಗಮಿಸಿದ್ದ ಬಿ.ವೈ ವಿಜಯೇಂದ್ರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದ ವರುಣ ಕ್ಷೇತ್ರದ ಮುಖಂಡ ಸದಾನಂದ ಅವರನ್ನು ಕರೆಸಿಕೊಂಡು ಪಕ್ಷದಲ್ಲಿಯೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅಲ್ಲದೇ ಕೆಲ ತಿಂಗಳಿಂದ ಪಕ್ಷದ ಎಲ್ಲಾ ಚಟುವಟಿಕೆಗಳಿಂದ ದೂರ ಉಳಿದಿದ್ದ ಕವೀಶ್ ಗೌಡ ಅವರ ಮನೆಗೆ ತೆರಳಿ, ಕೆಲ ಹೊತ್ತು ಮಾತುಕತೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.