Advertisement

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

10:25 PM Oct 01, 2022 | Team Udayavani |

ಇಸ್ಲಾಮಾಬಾದ್: ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಪಾಕಿಸ್ಥಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಇಸ್ಲಾಮಾಬಾದ್ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಹೊರಡಿಸಿದೆ.

Advertisement

ಇಸ್ಲಾಮಾಬಾದ್‌ನ ಮ್ಯಾಜಿಸ್ಟ್ರೇಟ್ ಅವರು ತಹ್ರಿಕ್-ಎ-ಇನ್ಸಾಫ್ ನಾಯಕ ಇಮ್ರಾನ್ ಖಾನ್‌ಗೆ ಸೆಪ್ಟೆಂಬರ್ 30 ರಂದು ಬಂಧನ ವಾರಂಟ್ ಹೊರಡಿಸಿದ್ದು, ಇಮ್ರಾನ್ ಖಾನ್ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ರಾಣಾ ಮುಜಾಹಿದ್ ರಹೀಮ್ ಅವರು ವಾರಂಟ್ ಹೊರಡಿಸಿದ್ದಾರೆ. ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಇಸ್ಲಾಮಾಬಾದ್‌ನಲ್ಲಿ 20ನೇ ಆಗಸ್ಟ್ 2022 ರಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಝೆಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ ಆರೋಪ ಇಮ್ರಾನ್ ಖಾನ್ ಮೇಲಿದೆ. ಅವರ ಹೇಳಿಕೆಗಳ ನಂತರ, ಆಗಸ್ಟ್ 20 ರಂದು ಅವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next