ಕಾಬುಲ್: ಬುಧವಾರ ಬೆಳ್ಳಂಬೆಳಗ್ಗೆ ವಾಯುವ್ಯ ಅಫ್ಘಾನಿಸ್ತಾನದಲ್ಲಿ ಮತ್ತೆ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ ತಿಳಿಸಿದೆ.
10 ಕಿಮೀ (6.21 ಮೈಲಿ) ಆಳದಲ್ಲಿ ಕಂಪನದ ಅನುಭವವಾಗಿದೆ ಎಂದು ಸಂಶೋಧನಾ ಕೇಂದ್ರ ವರದಿ ಮಾಡಿದೆ.
ಕಳೆದ ಶನಿವಾರದಂದು ಹೆರಾತ್ ನಗರದ ವಾಯುವ್ಯದಲ್ಲಿ ಸರಣಿ ಭೂಕಂಪ ಸಂಭವಿಸಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದವು ಹೆಚ್ಚಿನ ಸಂಖ್ಯೆಯಲ್ಲಿ ಜನ ಗಾಯಗೊಂಡಿದ್ದಾರೆ. ರಕ್ಷಣಾ ತಂಡ ಈಗಾಗಲೇ ಕಟ್ಟಡದ ಅವಶೇಷಗಳಡಿ ಸಿಲುಕಿರುವ ದೇಹಗಳನ್ನು ಪತ್ತೆಹಚ್ಚುವ ಕಾರ್ಯಗಳನ್ನು ನಡೆಸುತ್ತಿದ್ದು ಇದೀಗ ಸಂಭವಿಸಿದ ಭೂಕಂಪನದಲ್ಲಿ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ ಎನ್ನಲಾಗಿದೆ.
ಸರಣಿ ಭೂಕಂಪನದಿಂದ ಕಂಗಾಲಾಗಿರುವ ಅಲ್ಲಿನ ಜನ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: Israel-Hamas War: ಗಾಜಾ ಮರಳಿ ಇಸ್ರೇಲ್ ವಶಕ್ಕೆ… 3,000 ಗಡಿ ದಾಟಿದ ಮೃತರ ಸಂಖ್ಯೆ