Advertisement

ಅಮರಾವತಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 12 ನವಜಾತ ಶಿಶುಗಳ ರಕ್ಷಣೆ

08:55 PM Sep 25, 2022 | Team Udayavani |

ಅಮರಾವತಿ: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (ಎನ್‌ಐಸಿಯು) ವೆಂಟಿಲೇಟರ್‌ನಲ್ಲಿದ್ದ 12 ಶಿಶುಗಳನ್ನು ಯಾವುದೇ ಗಾಯಗಳಿಲ್ಲದೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಪೂರ್ವ ಮಹಾರಾಷ್ಟ್ರದ ಅಮರಾವತಿ ನಗರದ ಜಿಲ್ಲಾ ಮಹಿಳಾ ಆಸ್ಪತ್ರೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಇದನ್ನೂ ಓದಿ : ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ವೈದ್ಯ ಸೇರಿ ಇಬ್ಬರು ಮಕ್ಕಳು ಸಜೀವ ದಹನ

ನವಜಾತ ಶಿಶುಗಳ ಐಸಿಯುನಿಂದ ಹೊಗೆ ಬರುತ್ತಿರುವುದನ್ನು ಆಸ್ಪತ್ರೆಯ ಸಿಬಂದಿ ಗಮನಿಸಿ ತತ್ ಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದ 12 ನವಜಾತ ಶಿಶುಗಳನ್ನು ರಕ್ಷಿಸಿ ದೊಡ್ಡ ದುರಂತವನ್ನು ತಪ್ಪಿಸಿದರು, ”ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಗ್ನಿಶಾಮಕ ದಳಗಳು ಸಕಾಲಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದವು, ವೆಂಟಿಲೇಟರ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದರು.

Advertisement

ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಹೊಸದಾಗಿ ನೇಮಕಗೊಂಡ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಘಟನೆಯ ಬಗ್ಗೆ 24 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಘಟನೆಯ ಕುರಿತು ತನಿಖೆ ನಡೆಸಲು ಜಿಲ್ಲಾಧಿಕಾರಿ ಪವನೀತ್ ಕೌರ್ ಅವರು ಜಿಲ್ಲಾ ಸಿವಿಲ್ ಸರ್ಜನ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದ್ದಾರೆ ಎಂದು ಅವರು ಹೇಳಿದರು.

ಜನವರಿ 9, 2021 ರಂದು, ಪೂರ್ವ ಮಹಾರಾಷ್ಟ್ರದ ಭಂಡಾರಾದಲ್ಲಿರುವ ಜಿಲ್ಲಾ ಜನರಲ್ ಆಸ್ಪತ್ರೆಯ ನವಜಾತ ಆರೈಕೆ ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಕನಿಷ್ಠ 10 ನವಜಾತ ಶಿಶುಗಳು ಸಾವನ್ನಪ್ಪಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next