ಮುಂಬಯಿ: ಮಹಾರಾಷ್ಟ್ರದ ನವಿ ಮುಂಬೈ ಪೊಲೀಸರು ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ ಐವರು ಮಹಿಳೆಯರು ಸೇರಿದಂತೆ 13 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
Advertisement
ಮಂಗಳವಾರ ರಾತ್ರಿ ನ್ಯೂ ಪನ್ವೇಲ್‌ನ ಖಾಂದಾ ಕಾಲೋನಿಯಿಂದ ವಿದೇಶಿಯರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಖಂಡೇಶ್ವರ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ.
ಬಂಧಿತರು ಕಳೆದ ಒಂದು ವರ್ಷದಿಂದ ವೀಸಾ/ ಪಾಸ್‌ಪೋರ್ಟ್ ಇಲ್ಲದೆ ವಾಸಿಸುತ್ತಿದ್ದರು. ಬಂಧಿತರ ವಿರುದ್ಧ ಬುಧವಾರ ವಿದೇಶಿ ಕಾಯ್ದೆ ಮತ್ತು ಪಾಸ್‌ಪೋರ್ಟ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.