ಮುಂಬಯಿ : ಮುಂಬೈನ ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ತಮ್ಮ ಪಕ್ಷ ಜಯಗಳಿಸಲಿದೆ ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದು, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಬಣಕ್ಕೆ ಹಾಕುವ ಪ್ರತಿ ಮತವೂ ಎನ್‌ಸಿಪಿ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡಿದಂತಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ತೈವಾನ್ ಏಕೀಕರಿಸಲು ಬಲ ಪ್ರಯೋಗವನ್ನು ನಿಲ್ಲಿಸುವುದಿಲ್ಲ: ಚೀನ ಅಧ್ಯಕ್ಷ ಕ್ಸಿ
ನಾಗಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬವಾಂಕುಲೆ, ಅಂಧೇರಿ ಪೂರ್ವ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದುವಿಶ್ವಾಸ ವ್ಯಕ್ತಪಡಿಸಿದ್ದು, “ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಗೆ ಪ್ರತಿ ಮತವೂ ನಮ್ಮ ಐಕಾನ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರನ್ನು ನಿರಂತರವಾಗಿ ಅವಮಾನಿಸುತ್ತಿರುವ ಎನ್‌ಸಿಪಿ ಮತ್ತು ಕಾಂಗ್ರೆಸ್‌ಗೆ ನೀಡಿದ ಮತ ಎಂದರ್ಥ” ಎಂದು ಹೇಳಿದರು.
ಶಿವಸೇನೆಯ ಹಾಲಿ ಶಾಸಕ ರಮೇಶ್ ಲಟ್ಕೆ ಅವರ ನಿಧನದಿಂದಾಗಿ ನವೆಂಬರ್ 3 ರಂದು ನಡೆಯಲಿರುವ ಉಪಚುನಾವಣೆಯು ವಿರೋಧ ಪಕ್ಷವಾದ ‘ಶಿವಸೇನೆ ಉದ್ಧವ್ ಬಾಳಾಸಾಹೇಬ್ ಠಾಕ್ರೆ’ ಪಕ್ಷ ಮತ್ತು ಆಡಳಿತದಲ್ಲಿರುವ ಬಿಜೆಪಿ- ಸಿಎಂ ಏಕನಾಥ್ ಶಿಂಧೆ ಅವರ ನೇತೃತ್ವದ ಸೇನಾ ಬಣದ ನಡುವೆ ನೇರ ಸ್ಪರ್ಧೆಯಾಗಿದೆ.
ದಿವಂಗತ ರಮೇಶ್ ಲಟ್ಕೆ ಅವರ ಪತ್ನಿ ರುತುಜಾ ಲಟ್ಕೆ ಅವರು ಎನ್‌ಸಿಪಿ ಮತ್ತು ಕಾಂಗ್ರೆಸ್ ಬೆಂಬಲಿತ ಠಾಕ್ರೆ ಬಣದ ಅಭ್ಯರ್ಥಿಯಾಗಿದ್ದಾರೆ. ಏಕನಾಥ್ ಶಿಂಧೆ ನೇತೃತ್ವದ ‘ಬಾಳಾಸಾಹೆಬಂಚಿ ಶಿವಸೇನೆ’ ಬೆಂಬಲಿತ ಬಿಜೆಪಿಯ ಮುರ್ಜಿ ಪಟೇಲ್ ಅವರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.
‘ಉದ್ಧವ್ ನೇತೃತ್ವದ ಹಿಂದಿನ ಮಹಾ ವಿಕಾಸ್ ಅಘಾಡಿ ಸರಕಾರ ಎಂದು ಆರೋಪಿಸಿದರು. ಠಾಕ್ರೆ ಮತ್ತು ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ತನ್ನ ಎರಡೂವರೆ ವರ್ಷಗಳ ಆಡಳಿತದಲ್ಲಿ ರಾಜ್ಯವನ್ನು ಮೋಸ ಮಾಡಿದೆ. ಆ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ ತಲೆಬುಡವಿಲ್ಲದ ಸ್ಥಿತಿ ನಿರ್ಮಾಣವಾಗಿತ್ತು’ ಎಂದು ಹೇಳಿದರು.