Advertisement

ಮಹಾ ಬಿಜೆಪಿ ಎಂಇಎಸ್ ಬೆಂಬಲಿಸುವುದಿಲ್ಲ: Devendra Fadnavis

11:16 AM Apr 26, 2023 | Shreeram Nayak |

ವಿಜಯಪುರ: ಮಹಾರಾಷ್ಟ್ರ ರಾಜ್ಯದಲ್ಲಿ ಮುಖ್ಯಮಂತ್ರಿ ಏಕನಾಥ ಶಿಂಧೆ ಬದಲಾವಣೆ ಇಲ್ಲವೇ ಇಲ್ಲ. ಏಕನಾಥ ನೇತೃತ್ವದಲ್ಲೇ ನಾವು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಎದುರಿಸಲಿದ್ದೇವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸ್ಪಷ್ಟಪಡಿಸಿದರು.

Advertisement

ಬುಧವಾರ ನಗರದಲ್ಲಿರುವ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಧ್ಯಮಗಳ ಸೃಷ್ಟಿ ಎಂದರು.

ಮಹಾರಾಷ್ಟ್ರ ಗಡಿ ವಿಷಯ ಸುಪ್ರೀಂ ಕೋರ್ಟ್ ನಲ್ಲಿದೆ. ವಿಶ್ವ ಕನ್ನಡ ಸಮ್ಮೇಳನಕ್ಕೆ ನಾವು ಎಂದೂ ವಿರೋಧ ಮಾಡಿಲ್ಲ. ಕರ್ನಾಟಕದಲ್ಲಿ ಮಹಾರಾಷ್ಟ್ರ ಬಿಜೆಪಿ ಎಂದೂ ಎಂಇಎಸ್ ಬೆಂಬಲಿಸಿಲ್ಲ ಎಂದು ಸಮಜಾಯಿಷಿ ನೀಡಿದರು.

ಮಹಾರಾಷ್ಟ್ರ ಸರ್ಕಾರ ಜಾರಿಗೆ ತಂದಿರುವ ವಿಮಾ ಅನುಷ್ಠಾನ ನಾವು ಮಾಡಿದ್ದರೂ ಅದನ್ನು ರೂಪಿಸಿದ್ದ ಕಾಂಗ್ರೆಸ್ ಪಕ್ಷ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ಮುಸ್ಲಿಮರ ಧರ್ಮಾಧಾರಿತ ಮೀಸಲು ರದ್ದು ಮಾಡಿರುವುದು ಸಾಂವಿಧಾನಿಕ ಅಡಿಯಲ್ಲಿದೆ. ದೇಶದ ಇತರೆ ರಾಜ್ಯಗಳಲ್ಲಿ ಮುಸ್ಲಿಮರಿಗೆ ಮೀಸಲು ಕಲ್ಪಿಸಿದ್ದನ್ನು ಸುಪ್ರೀಂ ಕೋರ್ಟ್ ಒಪ್ಪಿಲ್ಲ ಎಂಬುದೂ ಇಲ್ಲಿ ಗಮನೀಯ ಎಂದರು.

Advertisement

ಮತ್ತೊದೆಡೆ ಲಿಂಗಾಯತ, ಒಕ್ಕಲಿಗ, ಇತರೆ ಹಿಂದುಳಿದಿದೆ ಸಮುದಾಯಗಳಿಗೆ ಮೀಸಲು ಕಲ್ಪಿಸಿ ಸಾಮಾಜಿಕ ನ್ಯಾಯ ಅನುಸರಿಸಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ ಮಂತ್ರದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯ ಕರ್ನಾಟಕ ರಾಜ್ಯದಲ್ಲಿ ಅನುಷ್ಠಾನವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಮತ್ತೊಮ್ಮೆ ಬಹುಮತದಿಂದ ಅಧಿಕಾರಕ್ಕೆ ಬರುವುದು ಖಚಿತ ಎಂದರು.

ಕರ್ನಾಟಕದಲ್ಲಿ ಮೋದಿ ಹಾಗೂ ಬೊಮ್ಮಾಯಿ ಡಬಲ್ ಎಂಜಿನ್‌ ಸರ್ಕಾರಗಳು ಉತ್ತಮ ಆಡಳಿತ ನೀಡಿವೆ. ಕರ್ನಾಟಕ ರಾಜ್ಯದಲ್ಲಿ ನಾಗರಿಕರಿಗೆ ಬಿಜೆಪಿ ಸರ್ಕಾರಗಳು ಅಗತ್ಯ ಮೂಲಭೂತ ಸೌಕರ್ಯಗಳ ಕಲ್ಪಿಸಿವೆ. ಹೀಗಾಗಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿ ಬಳಿಕ ನಗರದಲ್ಲಿರುವ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿ ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next