Advertisement

ನಮ್ಮ ಮೈತ್ರಿ ಸರಕಾರ ನ್ಯಾಯಸಮ್ಮತವಾಗಿದ್ದು, ಅವಧಿ ಪೂರೈಸುತ್ತದೆ: ಫಡ್ನವೀಸ್

09:51 PM Feb 11, 2023 | Team Udayavani |

ನಾಸಿಕ್: ಏಕನಾಥ್ ಶಿಂಧೆ-ಬಿಜೆಪಿ ಸರಕಾರವು ನ್ಯಾಯಸಮ್ಮತವಾಗಿದೆ ಮತ್ತು ಅಧಿಕಾರದಲ್ಲಿ ಮುಂದುವರಿಯುತ್ತದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಶನಿವಾರ ಹೇಳಿದ್ದಾರೆ.

Advertisement

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಅದರ ಪತನದ ಬಗ್ಗೆ ಭವಿಷ್ಯ ನುಡಿದ ಬೆನ್ನಲ್ಲೇ, ಜೂನ್ 2022 ರಲ್ಲಿ ಅಧಿಕಾರಕ್ಕೆ ಬಂದ ಸರಕಾರವು ಸಂವಿಧಾನದ ನಿಯಮಗಳ ಪ್ರಕಾರ ರಚನೆಯಾಗಿದೆ ಎಂದು ಫಡ್ನವೀಸ್ ಹೇಳಿದ್ದಾರೆ.

ನಾಸಿಕ್ ನಗರದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಯನ್ನುದ್ದೇಶಿಸಿ ಮಾತನಾಡಿದ ಫಡ್ನವೀಸ್, ಏಕನಾಥ್ಅ ಶಿಂಧೆ ಅವರ ಬಣದ 16 ಶಾಸಕರ ವಿರುದ್ಧ ಶಿವಸೇನೆ (ಯುಬಿಟಿ) ಬಣ ಸಲ್ಲಿಸಿರುವ ಅನರ್ಹತೆ ಅರ್ಜಿಯನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಉಳಿದ 10-15 ಶಾಸಕರು (ಠಾಕ್ರೆ ನೇತೃತ್ವದ ಶಿವಸೇನೆ ಪಾಳಯದಲ್ಲಿರುವ) ಪಕ್ಷಾಂತರ ಮಾಡದಂತೆ ಈ ಸಂದೇಶವನ್ನು ಹರಡಲಾಗುತ್ತಿದೆ. ನಾವು ಏನೇ ಮಾಡಿದರೂ ನಿಯಮಗಳ ಪ್ರಕಾರ ಮತ್ತು ಸಂವಿಧಾನಕ್ಕೆ ಬದ್ಧವಾಗಿದೆ. ನಮ್ಮ ಸರ್ಕಾರವು ಗದ್ದಾರ್‌ಗಳದ್ದು (ದೇಶದ್ರೋಹಿಗಳ) ಅಲ್ಲ, ಆದರೆ ಖುದ್ದಾರ್‌ಗಳದ್ದು (ಸ್ವಾಭಿಮಾನಿಗಳ) ”ಎಂದು ಫಡ್ನವಿಸ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next