ಮುಂಬಯಿ : ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರದಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಮತ್ತು ಎನ್‌ಸಿಪಿ ಕೇವಲ ಎರಡು ಲೋಕಸಭಾ ಸ್ಥಾನಗಳನ್ನು ತಮ್ಮ ಪಕ್ಷಕ್ಕೆ ನೀಡಿದರೂ ಒಪ್ಪಿಕೊಳ್ಳಬೇಕಾದ ಪರಿಸ್ಥಿತಿಯಲ್ಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಶನಿವಾರ ಲೇವಡಿ ಮಾಡಿದ್ದಾರೆ.
ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬವಾಂಕುಲೆ, ಅವಿಭಜಿತ ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡಾಗ ಬಿಜೆಪಿ ಠಾಕ್ರೆ ಅವರನ್ನು ಅಣ್ಣನಂತೆ ನಡೆಸಿಕೊಂಡಿತ್ತು ಎಂದರು.
ಈ ಹಿಂದೆ ಶಿವಸೇನೆಯೊಂದಿಗೆ ಇದ್ದ ರಾಮ್‌ಟೆಕ್ ಕ್ಷೇತ್ರದ ಮೇಲೆ ಕಾಂಗ್ರೆಸ್ ಈಗಾಗಲೇ ಕೈ ಹಾಕಿದೆ, ಈಗ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವ ವಹಿಸಿದ್ದಾರೆ ಎಂದು ಬಿಜೆಪಿ ನಾಯಕ ಹೇಳಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ವೇಳೆ 48 ಸ್ಥಾನಗಳ ಪೈಕಿ ಬಿಜೆಪಿ 23 ಮತ್ತು ಅವಿಭಜಿತ ಶಿವಸೇನೆ 18 ಸ್ಥಾನಗಳನ್ನು ಗೆದ್ದಿದ್ದವು.