Advertisement
ಶಿವಸೇನೆಯ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಸಾಮಾನ್ಯ ಕನಿಷ್ಠ ಯೋಜನೆಯನ್ನು ಬಿಡುಗಡೆ ಮಾಡಲಾಗಿದೆ. ಯೋಜನೆಯಲ್ಲಿ ರೈತರು, ಮಹಿಳೆ, ಶಿಕ್ಷಣ, ಆರೋಗ್ಯ, ನಿರುದ್ಯೋಗ ಮತ್ತು ಸಾಮಾಜಿಕ ನ್ಯಾಯ ಸೇರಿ ಹಲವಾರು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಈ ಯೋಜನೆಗಳು ಜಾರಿಯಾಗುವಂತೆ ನೋಡಿಕೊಳ್ಳಲು ಎರಡು ಸಮನ್ವಯ ಸಮಿತಿಗಳನ್ನು ರಚಿಸಲಾಗಿದೆ. ಒಂದು ಸಮಿತಿಯಲ್ಲಿ ಸಂಪುಟದ ಸಚಿವರು ಇರಲಿದ್ದು, ಮತ್ತೊಂದು ಇಡೀ ಮೈತ್ರಿಯನ್ನು ಒಳಗೊಂಡ ಸಮನ್ವಯ ಸಮಿತಿ ರಚಿಸಲಾಗಿದ್ದು, ಇದರಲ್ಲಿ 3 ಪಕ್ಷಗಳ ಪ್ರಮುಖರು ಇರಲಿದ್ದಾರೆ.
Related Articles
Advertisement
– ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ.
– ಆರ್ಥಿಕವಾಗಿ ದುರ್ಬಲರಾದ ಕೃಷಿ ಕಾರ್ಮಿಕರ ಮಕ್ಕಳಿಗೆ ಬಡ್ಡಿರಹಿತ ಶೈಕ್ಷಣಿಕ ಸಾಲ.
– ರೈತರ ಸಾಲ ಮನ್ನಾ ಯೋಜನೆ.
– ಸ್ಥಳೀಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಶೇ.80ರಷ್ಟು ಮೀಸಲಾತಿ. ಇದಕ್ಕಾಗಿ ಕಾನೂನು.
– ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ.
– ಒಂದು ರೂಪಾಯಿ ಕ್ಲಿನಿಕ್‌ಗಳ ಸ್ಥಾಪನೆ ಹಾಗೂ ರಾಜ್ಯದ ಪ್ರತಿಯೊಬ್ಬ ನಾಗರಿಕರಿಗೂ ಆರೋಗ್ಯ ವಿಮೆ.