ಬೆಂಗಳೂರು: ನ್ಯಾಯಮಂಡಳಿ ಆದೇಶ ಉಲ್ಲಂಘಿಸಿ ಕರ್ನಾಟಕ ಮಹದಾಯಿ ಕೊಳ್ಳದಲ್ಲಿ ಕಾಮಗಾರಿ ನಡೆಸುತ್ತಿದೆ ಎಂದು ಆರೋಪಿಸಿ ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತೀವ್ರ ಆಕ್ಷೇಪ ಎತ್ತಿರುವ ರಾಜ್ಯ ಸರ್ಕಾರ, ಇದು ಗೋವಾ ನೀರಾವರಿ ಸಚಿವ ವಿನೋದ್ ಪಾಲೇಕರ್ ನ್ಯಾಯಾಧಿಕರಣದ ದಾರಿ ತಪ್ಪಿಸುವ ಪ್ರಯತ್ನ ಎಂದು ಹೇಳಿದೆ.
ಈ ಕುರಿತು ಮಹದಾಯಿ ನ್ಯಾಯಾಧಿಕರಣಕ್ಕೆ ಸೋಮ ವಾರ ಪ್ರಮಾಣ ಪತ್ರ ಸಲ್ಲಿಸಿರುವ ರಾಜ್ಯ ಸರ್ಕಾರ, ಗೋವಾ ಸರ್ಕಾರ ಮಾಡಿರುವ ನ್ಯಾಯಾಂಗ ನಿಂದನೆ ಆರೋಪ ಸತ್ಯಕ್ಕೆ ದೂರವಾಗಿದೆ. ಕರ್ನಾಟಕ ಸರ್ಕಾರ ಯಾವತ್ತೂ ನ್ಯಾಯಾಧಿಕರಣದ ಆದೇಶ ಉಲ್ಲಂಘಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಮಹದಾಯಿ ವಿವಾದ ಕುರಿತಂತೆ ನ್ಯಾಯಾಧಿಕರಣದಲ್ಲಿ ಮಂಗಳವಾರದಿಂದ ವಿಚಾರಣೆ ಆರಂಭವಾಗಲಿದ್ದು, ರಾಜ್ಯ ಸರ್ಕಾರದ ಪರವಾಗಿ ವಕೀಲ ನಿಶಾಂತ್ ಪಾಟೀಲ್ ಸೋಮವಾರ ವಿವರವಾದ ಪ್ರಮಾಣಪತ್ರ ಸಲ್ಲಿಸಿದ್ದಾರೆ.
ಗೋವಾ ಸರ್ಕಾರ ಆಧಾರ ರಹಿತ ಆರೋಪ ಮಾಡುತ್ತಿದ್ದು, ಗೋವಾ ನೀರಾವರಿ ಸಚಿವ ವಿನೋದ್ ಪಾಲೇಕರ್ ಫ್ಯಾಸಿಸ್ಟ್ ರೀತಿಯಲ್ಲಿ ಹೇಳಿಕೆ ನೀಡಿ, ವಿವಾದದ ಕೊನೆಯ ಹಂತದಲ್ಲಿ ನ್ಯಾಯಾಧಿಕರಣದ ದಾರಿ ತಪ್ಪಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಪ್ರಮಾಣಪತ್ರದಲ್ಲಿ ಆರೋಪಿಸಲಾಗಿದೆ. ಗೋವಾ ಸರ್ಕಾರ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಕಾನೂನು ಬದ್ದವಾಗಿಲ್ಲ. ನ್ಯಾಯಮಂಡಳಿ ಇದುವರೆಗೂ ತನ್ನ ಯಾವುದೇ ಆದೇಶದಲ್ಲಿ ಕಾಮಗಾರಿ ನಿಲ್ಲಿಸುವ ಕುರಿತು ಹೇಳಿಲ್ಲ. ಅಲ್ಲದೆ, ನ್ಯಾಯಾಂಗ ನಿಂದನೆ ಅರ್ಜಿ ಕುರಿತು ವಿಚಾ ರಣೆ ನಡೆಸಿ ತೀರ್ಪು ನೀಡುವ ಅಧಿಕಾರ ನ್ಯಾಯಮಂಡಳಿ ವ್ಯಾಪ್ತಿಗೆ ಬರುವುದಿಲ್ಲ ಎಂದು ಸರ್ಕಾರ ಪ್ರಮಾಣಪತ್ರದಲ್ಲಿ ವಾದಿಸಿದೆ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿರುವ ನ್ಯಾಯಾಧಿಕರಣ, ಕಾಮಗಾರಿ ಸ್ಥಗಿತಗೊಳಿಸುವಂತೆ ಆದೇಶ ನೀಡಿಲ್ಲ. ಅದರ ಬದಲಾಗಿ ಗೋವಾ, ಮಹಾ ರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳ ಸೂಪರಿಂಟೆಂಡೆಂಟ್ ಎಂಜಿನಿಯರ್‌ಗಳ ಮೇಲ್ವಿಚಾರಣೆ ಯಲ್ಲಿ ಕಾಮಗಾರಿ ಮುಂದುವರಿಸಲು ತಿಳಿಸಿದೆ. ಹೀಗಾಗಿ, ಗೋವಾ ಸರ್ಕಾರ ಮಾಡಿರುವ ನ್ಯಾಯಾಂಗ ನಿಂದನೆ
ಆರೋಪ ಸತ್ಯಕ್ಕೆ ದೂರವಾಗಿದೆ. ಆದ್ದರಿಂದ ನ್ಯಾಯಾಂಗ ನಿಂದನೆ ಅರ್ಜಿಯನ್ನು ತಿರಸ್ಕರಿಸುವಂತೆ ಪ್ರಮಾಣಪತ್ರದಲ್ಲಿ
ರಾಜ್ಯ ಸರ್ಕಾರ ನ್ಯಾಯಾಧಿಕರಣವನ್ನು ಕೋರಿ¨