Advertisement

ಮಹದಾಯಿ ವಿವಾದ: ಪಕ್ಷದ ವೇದಿಕೆಯಲ್ಲಿ ಚರ್ಚಿಸುತ್ತೇನೆ

07:25 AM Sep 13, 2017 | Team Udayavani |

ಬೆಂಗಳೂರು:ಮಹದಾಯಿ ವಿವಾದ ಬಗೆಹರಿಸುವ ಸಂಬಂಧ ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಬಳಿ ಬಿಜೆಪಿ ನಿಯೋಗ ಕರೆದೊಯ್ಯುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿದ ಬಳಿಕ ಪ್ರತಿಕ್ರಿಯೆ ನೀಡುವುದಾಗಿ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

Advertisement

ವಿಧಾನಸೌಧದಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಹದಾಯಿ ವಿವಾದ ಕುರಿತು ಯಡಿಯೂರಪ್ಪ ಅವರು ಮುಂದಡಿ ಇಟ್ಟಿದ್ದಾರೆ. ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಂಪರ್ಕದಲ್ಲಿದ್ದಾರೆ. ಹೀಗಾಗಿ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ಪಕ್ಷದ ವೇದಿಕೆಯಲ್ಲಿ ಇನ್ನೊಮ್ಮೆ ಚರ್ಚಿಸಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

ಗೋವಾ ಹಾಗೂ ಮಹಾರಾಷ್ಟ್ರಗಳಲ್ಲಿ ಪ್ರತಿಪಕ್ಷವಾಗಿರುವ ಕಾಂಗ್ರೆಸ್‌ನ ಮುಖಂಡರ ಜತೆಗೆ ರಾಜ್ಯದ ಮುಖ್ಯಮಂತ್ರಿಯಾಗಲೀ, ಕಾಂಗ್ರೆಸ್‌ ನಾಯಕರಾಗಲೀ ಮಾತುಕತೆ ನಡೆಸಿಲ್ಲ. ಒಂದು ವೇಳೆ ಬಿಜೆಪಿ ಅಲ್ಲಿನ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಅವರ ಮನವೊಲಿಸಿ ಮಹದಾಯಿ ನೀರನ್ನು ಕರ್ನಾಟಕ್ಕೆ ಬಿಡುವಂತೆ ಮಾಡಿದರೆ ಅಲ್ಲಿನ ಪ್ರತಿಪಕ್ಷಗಳು ತಿರುಗಿ ಬೀಳಬಹುದು. ಈ ಕಾರಣದಿಂದಾಗಿ ಬಿಜೆಪಿ ನಿಯೋಗ ಹೋಗುವುದು ವಿಳಂಬವಾಗಿರಬಹುದು. ಆದ್ದರಿಂದ ರಾಜ್ಯದ ಕಾಂಗ್ರೆಸ್‌ ನಾಯಕರು ಮೊದಲು ಎರಡೂ ರಾಜ್ಯಗಳಲ್ಲಿ ಪ್ರತಿಪಕ್ಷವಾಗಿರುವ ಕಾಂಗ್ರೆಸ್‌ನವರ ಮನವೊಲಿಸಲಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next