Advertisement

5ನೇ ವರ್ಷಕ್ಕೆ ಕಾಲಿಟ್ಟ ಮಹದಾಯಿ ಹೋರಾಟ

10:26 PM Jul 16, 2019 | Team Udayavani |

ನರಗುಂದ: ಮಹದಾಯಿ ನೀರಿಗಾಗಿ ನಡೆಯುತ್ತಿರುವ ಹೋರಾಟ 5ನೇ ವರ್ಷಕ್ಕೆ ಕಾಲಿಟ್ಟಿದೆ. ಸಮಸ್ಯೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮಂಗಳವಾರ ಕರೆ ನೀಡಿದ್ದ ನರಗುಂದ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ.

Advertisement

ವ್ಯಾಪಾರಸ್ಥರು ಬಂದ್‌ ಬೆಂಬಲಿಸಿ ಸ್ವಯಂ ಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿದ್ದರು. ದೈನಂದಿನ ವಹಿವಾಟು ಸ್ಥಗಿತಗೊಳಿಸಿದ್ದರಿಂದ ಪಟ್ಟಣದ ಎಲ್ಲ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು.

ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬ್ಯಾರಿಕೇಡ್‌ಗಳನ್ನಿಟ್ಟು ಪೊಲೀಸರು ಯಾವುದೇ ವಾಹನ ಒಳ ಪ್ರವೇಶಿಸದಂತೆ ನೋಡಿಕೊಂಡರು. ಸಾರಿಗೆ ಸಂಸ್ಥೆಯ ಬಸ್‌ಗಳು ರಸ್ತೆಗಿಳಿಯಲಿಲ್ಲ. ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಎಲ್ಲೆಡೆ ಸೂಕ್ತ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಇದೇ ವೇಳೆ, ಮಹದಾಯಿಗಾಗಿ ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಯರಗಟ್ಟಿ, ಮುನವಳ್ಳಿ, ನವಲಗುಂದ ಹಾಗೂ ಗದಗದಲ್ಲಿ ರಸ್ತೆ ತಡೆ-ಪ್ರತಿಭಟನೆಗಳು ನಡೆದವು.

Advertisement

Udayavani is now on Telegram. Click here to join our channel and stay updated with the latest news.

Next