Advertisement

ಮಹಾದಾಯಿ; ಅಧಿಕಾರಕ್ಕೆ ಬಂದರೆ ಶಮನ: ಶಾ

06:00 AM Feb 27, 2018 | |

ಕಲಬುರಗಿ: ಮಹಾದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಹಿರಂಗವಾಗಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ವಿವಾದ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಮಹದಾಯಿ ಸಮಸ್ಯೆ ಬಗೆಹರಿಯುತ್ತದೆ. ಈ ರಾಜ್ಯದ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ಆದರೆ, ಬಿಜೆಪಿ ಸರ್ಕಾರ ಬಂದ ನಂತರ
ಸಮಸ್ಯೆ ಸರಳವಾಗಿ ಬಗೆಹರಿಯುತ್ತದೆ ಎಂದು ತಿಳಿಸಿದರು. ಮಹದಾಯಿ ವಿವಾದ ಬಗೆಹರಿಸಲು ಬಿಜೆಪಿ ಬದ್ಧವಾಗಿದೆ. ಈಗಾಗಲೇ ವಿವಾದ ವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ಬಗ್ಗೆ ಗೋವಾ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಇದನ್ನು ಕಾಂಗ್ರೆಸ್‌ ಸರ್ಕಾರ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದರೆ ಸಮಸ್ಯೆ ಬಗೆಹರಿಸಬಹುದಿತ್ತು. ಆದರೆ, ಅದನ್ನು ಪ್ರತಿಷ್ಠೆಯಾಗಿ ಪರಿಗಣಿಸಿ ವರ್ತಿಸಿದ್ದರಿಂದ ವಿವಾದ ಬಗೆಹರಿಸಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ಪ್ರಸ್ತಾವನೆ ಹಿಂದಕ್ಕೆ: ಮಠ-ಮಂದಿರ, ಹಿಂದೂ ದೇವಸ್ಥಾನಗಳ ಸಂಬಂಧವಾಗಿ ಸಿದ್ದರಾಮಯ್ಯ ಸರ್ಕಾರ ನಡೆದುಕೊಳ್ಳುವ ರೀತಿಯಿಂದ ಜನ ಬೇಸತ್ತಿದ್ದಾರೆ. ಅಧಿಕಾರಕ್ಕೆಬಂದ ಕೂಡಲೇ ಮಠ-ಮಂದಿರಗಳ ಸ್ವಾಧೀನ ಪ್ರಸ್ತಾಪ ಹಿಂದಕ್ಕೆ ಪಡೆಯಲಾಗುವುದು ಎಂದು ಭರವಸೆ ನೀಡಿದರು. 

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರವನ್ನು 10 ಪರ್ಸೆಂಟ್‌ ಸರ್ಕಾರ ಎಂದು ಟೀಕಿಸಿದ್ದಕ್ಕೆ ದಾಖಲೆ ಕೊಡಿ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ದಾರೆ. ಆದರೆ, ಅವರು ಕಟ್ಟಿಕೊಂಡಿದ್ದ 40 ಲಕ್ಷ ರೂ. ಮೊತ್ತದ ಕೈಗಡಿಯಾರವೇ ಪರ್ಸಂಟೇಜ್‌ ಸರ್ಕಾರಕ್ಕೆ ಸಾಕ್ಷಿ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next