Advertisement

Mahadayi Water Dispute; ಸುಪ್ರೀಂ ಕೋರ್ಟ್ ನಲ್ಲಿ ವಿಶೇಷ ಅರ್ಜಿ ವಿಚಾರಣೆ

06:32 PM Jan 10, 2024 | Team Udayavani |

ಪಣಜಿ: ಮಹದಾಯಿ ನದಿ ನೀರು ಹಂಚಿಕೆ ಪ್ರಕರಣದಲ್ಲಿ ಗೋವಾ ಸುಪ್ರೀಂ ಕೋರ್ಟ್‍ನಲ್ಲಿ ಸಲ್ಲಿಸಿರುವ ವಿಶೇಷ ಅರ್ಜಿಯ ವಿಚಾರಣೆ ಬುಧವಾರ (ಜ.10 ರಂದು) ಆರಂಭಗೊಂಡಿದೆ. ಕಳೆದ ಕೆಲ ತಿಂಗಳ ಹಿಂದೆಯೇ ಈ ಪ್ರಕರಣದ ವಿಚಾರಣೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಸುಪ್ರಿಂ ಕೋರ್ಟನಲ್ಲಿ ವಿಚಾರಣೆ ನಡೆದಿಲ್ಲ.

Advertisement

ಇದೀಗ ಜ. 10 ರಂದು ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ಆರಂಭಗೊಂಡಿದೆ. ಅರ್ಜಿಯ ಮೇಲಿನ ತೀರ್ಪು ಗೋವಾ ರಾಜ್ಯದ ನೀರಿನ ಹಂಚಿಕೆ ಸಮಸ್ಯೆಯನ್ನು ಪರಿಹರಿಸುತ್ತದೆ ಎಂದು ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದ್ದು ಈ ಅರ್ಜಿ ವಿಚಾರಣೆ ಮಹತ್ವ ಪಡೆದುಕೊಂಡಿದೆ.

ಮಹದಾಯಿ ವಿಚಾರವಾಗಿ ಗೋವಾ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಸ್ವೀಕರಿಸಿದೆ. ಜನವರಿ 11 ರಂದು ಕೂಡ ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದರಿಂದಾಗಿ ಮಹದಾಯಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಗೋವಾ ಈ ಎರಡೂ ರಾಜ್ಯಗಳ ಗಮನ ನ್ಯಾಯಾಲಯದತ್ತ ನೆಟ್ಟಿದೆ.

ಏನಿದು ಪ್ರಕರಣ..?
ಕರ್ನಾಟಕದಲ್ಲಿ ಕಳಸಾ ಭಂಡೂರ ವಿಸ್ತೃತ ಯೋಜನಾ ವರದಿ (ಡಿಪಿಆರ್)ಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ಬಳಿಕ ಮಹದಾಯಿ ವಿಚಾರ ಮತ್ತೆ ಚರ್ಚೆಗೆ ಬಂದಿತ್ತು. ಗೋವಾದಲ್ಲಿ ಪ್ರತಿಪಕ್ಷಗಳು ಮತ್ತು ಪರಿಸರವಾದಿಗಳು ಈ ನಿಟ್ಟಿನಲ್ಲಿ ಗೋವಾ ಸರ್ಕಾರವು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ನಂತರ ಗೋವಾ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next