Advertisement

ಮಾದಪ್ಪನ ದರ್ಶನಕ್ಕೆ 3 ದಿನ ನಿರ್ಬಂಧ

12:45 PM Sep 15, 2020 | Suhan S |

ಹನೂರು:ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪೂಜೆ ಹಿನ್ನೆಲೆ ಸೆ.16 ರಿಂದ ಸೆ.18ರವರೆಗೆ3 ದಿನಗಳಕಾಲ ಭಕ್ತಾದಿಗಳಿಗೆ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್‌.ರವಿ ಆದೇಶ ಹೊರಡಿಸಿದ್ದಾರೆ.

Advertisement

ಮಹದೇಶ್ವರಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆಯ ಹಿನ್ನೆಲೆ ಎಣ್ಣೆಮಜ್ಜನ ಸೇವೆ, ಅಮಾವಾಸ್ಯೆ ಪೂಜಾ ಕೈಂಕರ್ಯಗಳು ನಡೆಯುತ್ತಿದ್ದವು. ಪ್ರತಿ ವರ್ಷ ಈ ಅಮಾವಾಸ್ಯೆಗೆ ಲಕ್ಷಾಂತರ ಭಕ್ತಾದಿಗಳು ಪಾದಯಾತ್ರೆ ಮತ್ತು ವಾಹನಗಳ ಮೂಲಕ ತೆರಳಿ ಮಾದಪ್ಪನಿಗೆ ಪೂಜಾಕೈಂಕರ್ಯಗಳನ್ನು ನೆರವೇರಿಸಿ ಹರಕೆಕಾಣಿಕೆಗಳನ್ನು ಸಲ್ಲಿಸುತ್ತಿದ್ದರು. ಆದರೆ, ಈ ಬಾರಿ ಕೋವಿಡ್‌-19 ಸೋಂಕಿನ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳ ಆರೋಗ್ಯದ ದೃಷ್ಟಿಯಿಂದ ಮತ್ತು ಭಕ್ತಾದಿಗಳು ಬಂದಲ್ಲಿ ಸಾಮಾಜಿಕ ಅಂತರ, ಥರ್ಮಲ್‌ ಸ್ಕ್ರೀನಿಂಗ್‌ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆಕೈಗೊಳ್ಳಲು ಕಷ್ಟವಾಗುತ್ತದೆ ಎಂದು ಪ್ರಾಧಿಕಾರದಕಾರ್ಯದರ್ಶಿ ಜಯವಿಭವ ಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದರು.

ಹೀಗಾಗಿ 3 ದಿನಗಳಕಾಲ ಸಾಂಪ್ರ ದಾಯಿಕವಾಗಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ,ಕೆಲಸದ ನಿಮಿತ್ತ ತೆರಳುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಮಾತ್ರ ಅವಕಾಶಕಲ್ಪಿಸಿ ಸಾರ್ವಜನಿಕರ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next