Advertisement

ಮಹದೇವಪುರ: ಹಾಸಿಗೆ ಮಳಿಗೆಯಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

03:42 PM Mar 09, 2023 | Team Udayavani |

ಮಹದೇವಪುರ : ಕಾರ್ಲಾನ್ ಹಾಸಿಗೆ ಮಳಿಗೆಯಲ್ಲಿ ಅಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಬೆಳ್ಳಂದೂರು ಪೋಲೀಸ್ ಠಾಣಾ ವ್ಯಾಪ್ತಿಯ ಕೈಕೊಂಡ್ರಹಳ್ಳಿ ಸಮೀಪ ನಡೆದಿದೆ.

Advertisement

ಸರ್ಜಾಪುರ ಮುಖ್ಯರಸ್ತೆಯ ಕೈಕೊಂಡ್ರಹಳ್ಳಿ ಬಳಿ ಘಟನೆ ಸಂಭವಿಸಿದ್ದು, ಬೆಳಗ್ಗೆ 8.30ರ ಸುಮಾರಿಗೆ ಮಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಹಾಸಿಗೆ ಮಳಿಗೆ ಮುಖ್ಯ ರಸ್ತೆಯಲ್ಲೇ ಇರುವುದರಿಂದ ಅಕ್ಕಪಕ್ಕದಲ್ಲಿದ್ದ ಮಳಿಗೆಗಳಿಗೂ ಬೆಂಕಿಯ ಕೆನ್ನಾಲಿಗೆ ಆವರಿಸಿದೆ. ಕ್ಷಣಾರ್ಧದಲ್ಲಿ ಮಳಿಗೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಈ ವೇಳೆ ಮಳಿಗೆಗಳಲ್ಲಿ ಯಾರು ಇರಲಿಲ್ಲ ಅದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿಯಾಗಿಲ್ಲ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬಂದಿ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next