Advertisement

ವೀಣಾ ಬಿ. ರಘುಚಂದ್ರ ಶೆಟ್ಟಿಗೆ  “ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ’

07:57 PM Jan 19, 2023 | Team Udayavani |

ಬೆಂಗಳೂರು: ದಕ್ಷಿಣ ಕನ್ನಡ ಜೈನ ಮೈತ್ರಿ ಕೂಟ, ಬೆಂಗಳೂರು ನೀಡುವ ಈ ವರ್ಷದ “ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ’ಗೆ   ಜೈನ ಸಾಹಿತಿ – ಕವಯಿತ್ರಿ ವೀಣಾ ಬಿ.ರಘುಚಂದ್ರ ಶೆಟ್ಟಿ ಮೂಡುಬಿದಿರೆ ಅವರು ಆಯ್ಕೆಯಾಗಿದ್ದಾರೆ.

Advertisement

ಬೆಂಗಳೂರಿನ ಬಸವನಗುಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜ.26ರಂದು ನಡೆಯುವ ಮೈತ್ರಿ ಕೂಟದ ವಾರ್ಷಿಕೋತ್ಸವದಂದು ಕೇಂದ್ರ ಸಾಹಿತ್ಯ ಅಕಾಡಮಿ ಅಧ್ಯಕ್ಷ ಡಾ| ಚಂದ್ರಶೇಖರ ಕಂಬಾರ ಅವರು ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು 25 ಸಾವಿರ ರೂ.  ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಮೈತ್ರಿ ಕೂಟದ ಅಧ್ಯಕ್ಷ ಧರ್ಮಸ್ಥಳ ಸುರೇಂದ್ರ ಕುಮಾರ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next