Advertisement

ಹಳಿ ತಪ್ಪಿದ ರೈಲು: 52 ಪ್ರಯಾಣಿಕರಿಗೆ ಗಾಯ

02:05 AM Mar 31, 2017 | Team Udayavani |

ಬಾಂದ್ರಾ (ಉ.ಪ್ರ.): ಇಲ್ಲಿನ ಮಹೋಬ ಜಿಲ್ಲೆಯ ಬಳಿ ಗುರುವಾರ ನಸುಕಿನ ವೇಳೆ ಜಬಲ್ಪುರ್‌ -ನಿಜಾಮುದ್ದೀನ್‌ ಮಹಾಕೌಶಲ್‌ ಎಕ್ಸ್‌ಪ್ರೆಸ್‌ ರೈಲು ಹಳಿ ತಪ್ಪಿ 52ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳ ಪೈಕಿ 10 ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ.

Advertisement

ಗುರುವಾರ ನಸುಕಿನ 2.20ರ ವೇಳೆಗೆ ಘಟನೆ ನಡೆದಿದ್ದು, ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ರೈಲ್ವೇ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ತನಿಖೆ ನಡೆಸಲು ತಂಡ ರಚಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. “ಗಾಯಾಳುಗಳ ಪೈಕಿ ಹಲವರು ಚಿಕಿತ್ಸೆ ಪಡೆದು ತಮ್ಮ ಊರುಗಳಿಗೆ ತೆರಳಿದ್ದಾರೆ. ಕೆಲವರು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರ ಸ್ಥಿತಿ ತೀರ ಚಿಂತಾಜನಕವಾಗಿದೆ. ಸಣ್ಣಪುಟ್ಟ ಗಾಯವಾದವರಿಗೆ 25,000 ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಲಾಗಿದೆ,” ಎಂದು ಆರೋಗ್ಯ ಸಚಿವ ಸಿದ್ಧಾರ್ಥ್ ನಾಥ ಸಿಂಗ್‌ ಹೇಳಿದ್ದಾರೆ. ರಾಜ್ಯಸಭೆಯಲ್ಲೂ ಈ ವಿಷಯ ಪ್ರಸ್ತಾವವಾಗಿ ರೈಲ್ವೇ ಸುರಕ್ಷತೆ ಬಗ್ಗೆ ಸಂಸದರು ಕಳವಳ ವ್ಯಕ್ತಪಡಿಸಿದ್ದಾರೆ. 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next