Advertisement
ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೋಮವಾರ (ಸೆ23 ) ಮಾಧ್ಯಮಗಳೊಂದಿಗೆ ಮಾತನಾಡಿ”ಎಲ್ಲ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ. ಪ್ರಮುಖ ಆರೋಪಿಯನ್ನು ಗುರುತಿಸಲಾಗಿದ್ದು ಆತನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಅವನು ಹೊರ ರಾಜ್ಯದವನು. ನಾವು ಸದ್ಯಕ್ಕೆ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ, ಏಕೆಂದರೆ ಇದು ಆರೋಪಿಗೆ ಸಹಾಯವಾಬಹುದು” ಎಂದರು.
Related Articles
Advertisement
ಅಶ್ರಫ್ ನನ್ನು ಪೊಲೀಸರು ವಿಚಾರಣೆ ನಡೆಸಿದ್ದು ”ಮಹಾಲಕ್ಷ್ಮೀ ಯೊಂದಿಗೆ ಸಂಪರ್ಕದಲ್ಲಿದ್ದೆ, ಆದರೆ ನಾನು ಕೊಲೆ ಮಾಡಿಲ್ಲ. ಆರು ತಿಂಗಳ ಹಿಂದೆ ಇಬ್ಬರ ವಿಚಾರ ಮನೆಯವರಿಗೆ ಗೊತ್ತಾದ ಬಳಿಕ ಆಕೆಯ ಸಂಪರ್ಕ ಬಿಟ್ಟಿದ್ದೆ” ಎಂದು ಹೇಳಿದ್ದಾನೆ. ಪೊಲೀಸರು ಅಶ್ರಫ್ ಮೊಬೈಲ್ ಕರೆಗಳನ್ನು ಪರಿಶೀಲಿಸಿದ್ದು ಇಬ್ಬರ ನಡುವೆ ಕಳೆದ ಆರು ತಿಂಗಳಿಂದ ಸಂಪರ್ಕ ಇಲ್ಲದಿರುವುದು ತಿಳಿದು ಬಂದಿದ್ದು , ಆತನನ್ನುಬಿಟ್ಟು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಮರಣೋತ್ತರ ಪರೀಕ್ಷೆ ದೊಡ್ಡ ಸವಾಲು50ಕ್ಕೂ ಹೆಚ್ಚು ತುಂಡಾಗಿರುವ ಮೃತ ದೇಹದ ಮರಣೋತ್ತರ ಪರೀಕ್ಷೆ ಭಾನುವಾರ ನಡೆಸಲಾಯಿತು.ಪರೀಕ್ಷೆ ನಡೆಸುವುದು ವೈದ್ಯರಿಗೆ ದೊಡ್ಡ ಸವಾಲಾಗಿತ್ತು. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಎರಡು ಗಂಟೆಗಳ ಕಾಲ ಮರಣೋತ್ತರ ಪರೀಕ್ಷೆ ನಡೆಸಲಾಯಿತು.ಮೊದಲು ತುಂಡು ತುಂಡಾದ ದೇಹವನ್ನು ಜೋಡಿಸಿಕೊಂಡು, ನಂಬರ್‌ಗಳನ್ನು ಕೊಡಲಾಗಿತ್ತು. ಮೃತದೇಹವನ್ನು ಯಾವ ಆಯುಧದಿಂದ ಕತ್ತರಿಸಲಾಯಿತು ಎಂದೂ ಪರೀಕ್ಷಿಸಲಾಯಿತು. FSL ತಜ್ಞರಿಗೂ ಸವಾಲು ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಜ್ಞರಿಗೂ ತನಿಖೆ ಸವಾಲಾಗಿ ಪರಿಣಮಿಸಿದ್ದು ಮಹಾಲಕ್ಷ್ಮೀ ಮನೆಯನ್ನು ಸಂಪೂರ್ಣ ಪರಿಶೀಲನೆ ನಡೆಸಲಾಗಿದೆ ಆದರೂ ತಜ್ಞರಿಗೆ ರಕ್ತದ ಕಲೆಗಳು ಮತ್ತು ದೇಹ ಕತ್ತರಿಸಿದ ಸ್ಥಳದ ಗುರುತು ಪತ್ತೆಯಾಗಿಲ್ಲ. ಕೊಲೆ ಆರೋಪಿಯು ದೇಹ ಕತ್ತರಿಸಿ ತುಂಡು ತುಂಡು ಮಾಡಿ ಫ್ರಿಡ್ಜ್ ನಲ್ಲಿಟ್ಟು ಯಾವುದೇ ಗುರುತು ಸಿಗದಂತೆ ಮನೆಯನ್ನು ಸ್ವಚ್ಛ ಮಾಡಿ ಪರಾರಿಯಾದುದು ಇದಕ್ಕೆ ಕಾರಣ ಎನ್ನಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗ(NCW) ಪ್ರಕರಣದಲ್ಲಿ ಭಾಗಿಯಾದವರನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದೆ. ಮೂರು ದಿನಗಳಲ್ಲಿ ವಿವರವಾದ ವರದಿಯನ್ನು ಸಲ್ಲಿಸಲು ಮತ್ತು ಪ್ರಕರಣದ ಸಂಪೂರ್ಣ ಮತ್ತು ಸಮಯಕ್ಕೆ ಒಳಪಟ್ಟ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರಿಗೆ ಕೇಳಿದೆ.