Advertisement

Mahalakshmi 50 ಪೀಸ್‌ ಕೇಸ್; ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ: ನಗರ ಪೊಲೀಸ್ ಆಯುಕ್ತ

08:25 PM Sep 23, 2024 | Team Udayavani |

ಬೆಂಗಳೂರು: ಮಾಲ್‌ವೊಂದರ ಸೇಲ್ಸ್‌ಗರ್ಲ್ಸ್‌ ಮಹಾಲಕ್ಷ್ಮೀಯನ್ನು 50 ತುಂಡು ಮಾಡಿ ಹತ್ಯೆಗೈದಿರುವ ಪ್ರಕರಣದ ಉನ್ನತ ಮಟ್ಟದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದು ಆರೋಪಿಗಾಗಿ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ.

Advertisement

ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸೋಮವಾರ (ಸೆ23 ) ಮಾಧ್ಯಮಗಳೊಂದಿಗೆ ಮಾತನಾಡಿ”ಎಲ್ಲ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ. ಪ್ರಮುಖ ಆರೋಪಿಯನ್ನು ಗುರುತಿಸಲಾಗಿದ್ದು ಆತನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಅವನು ಹೊರ ರಾಜ್ಯದವನು. ನಾವು ಸದ್ಯಕ್ಕೆ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ, ಏಕೆಂದರೆ ಇದು ಆರೋಪಿಗೆ ಸಹಾಯವಾಬಹುದು” ಎಂದರು.

ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ ”ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಾಕಷ್ಟು ಮಾಹಿತಿ ಸಂಗ್ರಹಿಸಿರುವುದಾಗಿ ಹೇಳಿದ್ದಾರೆ. ಸಾಕಷ್ಟು ಮಾಹಿತಿ, ಸಾಕಷ್ಟು ಸುಳಿವುಗಳನ್ನು ಸಂಗ್ರಹಿಸಿದ್ದಾರೆ. ಒಬ್ಬ ಆರೋಪಿಯನ್ನೂ ಗುರುತಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸದ ಹೊರತು ವಿವರ ನೀಡಲು ಸಾಧ್ಯವಿಲ್ಲ. ಆತ ಪಶ್ಚಿಮ ಬಂಗಾಳದವನು ಎಂದು ಅವರು ಹೇಳಿದ್ದಾರೆ” ಎಂದು ತಿಳಿಸಿದರು.

ಮಹಾಲಕ್ಷ್ಮೀಯ ಪ್ರಿಯಕರನೇ ಕೊಂದು ಪರಾರಿಯಾಗಿರುವ ಬಲವಾದ ಶಂಕೆ ವ್ಯಕ್ತವಾಗಿದ್ದು, ಅದಕ್ಕೆ ಪೂರಕವೆಂಬಂತೆ ಆತನ ಮೊಬೈಲ್‌ ನಂಬರ್‌ ಕೂಡ ಸ್ವಿಚ್‌ ಆಫ್ ಆಗಿದೆ. ಹೀಗಾಗಿ ಪೊಲೀಸರು ಆತನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಮಹಾಲಕ್ಷ್ಮೀಯ ಪತಿ ಹೇಮಂತ್‌ ದಾಸ್‌, ನೆಲಮಂಗಲ ನಿವಾಸಿ ಕಟಿಂಗ್ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ಅಶ್ರಫ್ ಎಂಬಾತನ ಮೇಲೆ ಶಂಕೆ ವ್ಯಕ್ತಪಡಿಸಿದ್ದು ಪೊಲೀಸರಿಗೂ ಮಾಹಿತಿ ನೀಡಿದ್ದರು.

Advertisement

ಅಶ್ರಫ್ ನನ್ನು ಪೊಲೀಸರು ವಿಚಾರಣೆ ನಡೆಸಿದ್ದು ”ಮಹಾಲಕ್ಷ್ಮೀ ಯೊಂದಿಗೆ ಸಂಪರ್ಕದಲ್ಲಿದ್ದೆ, ಆದರೆ ನಾನು ಕೊಲೆ ಮಾಡಿಲ್ಲ. ಆರು ತಿಂಗಳ ಹಿಂದೆ ಇಬ್ಬರ ವಿಚಾರ ಮನೆಯವರಿಗೆ ಗೊತ್ತಾದ ಬಳಿಕ ಆಕೆಯ ಸಂಪರ್ಕ ಬಿಟ್ಟಿದ್ದೆ” ಎಂದು ಹೇಳಿದ್ದಾನೆ. ಪೊಲೀಸರು ಅಶ್ರಫ್ ಮೊಬೈಲ್​ ಕರೆಗಳನ್ನು ಪರಿಶೀಲಿಸಿದ್ದು ಇಬ್ಬರ ನಡುವೆ ಕಳೆದ ಆರು ತಿಂಗಳಿಂದ ಸಂಪರ್ಕ ಇಲ್ಲದಿರುವುದು ತಿಳಿದು ಬಂದಿದ್ದು , ಆತನನ್ನುಬಿಟ್ಟು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಮರಣೋತ್ತರ ಪರೀಕ್ಷೆ ದೊಡ್ಡ ಸವಾಲು
50ಕ್ಕೂ ಹೆಚ್ಚು ತುಂಡಾಗಿರುವ ಮೃತ ದೇಹದ ಮರಣೋತ್ತರ ಪರೀಕ್ಷೆ ಭಾನುವಾರ ನಡೆಸಲಾಯಿತು.ಪರೀಕ್ಷೆ ನಡೆಸುವುದು ವೈದ್ಯರಿಗೆ ದೊಡ್ಡ ಸವಾಲಾಗಿತ್ತು. ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಯಲ್ಲಿ ಎರಡು ಗಂಟೆಗಳ ಕಾಲ ಮರಣೋತ್ತರ ಪರೀಕ್ಷೆ ನಡೆಸಲಾಯಿತು.ಮೊದಲು ತುಂಡು ತುಂಡಾದ ದೇಹವನ್ನು ಜೋಡಿಸಿಕೊಂಡು, ನಂಬರ್‌ಗಳನ್ನು ಕೊಡಲಾಗಿತ್ತು. ಮೃತದೇಹವನ್ನು ಯಾವ ಆಯುಧದಿಂದ ಕತ್ತರಿಸಲಾಯಿತು ಎಂದೂ ಪರೀಕ್ಷಿಸಲಾಯಿತು.

FSL ತಜ್ಞರಿಗೂ ಸವಾಲು  

ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಜ್ಞರಿಗೂ ತನಿಖೆ ಸವಾಲಾಗಿ ಪರಿಣಮಿಸಿದ್ದು ಮಹಾಲಕ್ಷ್ಮೀ ಮನೆಯನ್ನು ಸಂಪೂರ್ಣ ಪರಿಶೀಲನೆ ನಡೆಸಲಾಗಿದೆ ಆದರೂ​ ತಜ್ಞರಿಗೆ ರಕ್ತದ ಕಲೆಗಳು ಮತ್ತು ದೇಹ ಕತ್ತರಿಸಿದ ಸ್ಥಳದ ಗುರುತು ಪತ್ತೆಯಾಗಿಲ್ಲ. ಕೊಲೆ ಆರೋಪಿಯು ದೇಹ ಕತ್ತರಿಸಿ ತುಂಡು ತುಂಡು ಮಾಡಿ ಫ್ರಿಡ್ಜ್ ನಲ್ಲಿಟ್ಟು ಯಾವುದೇ ಗುರುತು ಸಿಗದಂತೆ ಮನೆಯನ್ನು ಸ್ವಚ್ಛ ಮಾಡಿ ಪರಾರಿಯಾದುದು ಇದಕ್ಕೆ ಕಾರಣ ಎನ್ನಲಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗ(NCW) ಪ್ರಕರಣದಲ್ಲಿ ಭಾಗಿಯಾದವರನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದೆ. ಮೂರು ದಿನಗಳಲ್ಲಿ ವಿವರವಾದ ವರದಿಯನ್ನು ಸಲ್ಲಿಸಲು ಮತ್ತು ಪ್ರಕರಣದ ಸಂಪೂರ್ಣ ಮತ್ತು ಸಮಯಕ್ಕೆ ಒಳಪಟ್ಟ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರಿಗೆ ಕೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next