Advertisement

ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಮಂಜೂರು- ಕವಟಗಿಮಠ

05:59 PM Jul 06, 2022 | Team Udayavani |

ಚಿಕ್ಕೋಡಿ: ರೈತರ ಬಹುದಿನಗಳ ಬೇಡಿಕೆಯಾದ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಗೆ ರಾಜ್ಯ ಸರಕಾರ ಆಡಳಿತಾತ್ಮಕ  ಮಂಜೂರಾತಿ ಸಿಕ್ಕಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.

Advertisement

ಚಿಕ್ಕೋಡಿ ನಗರದ ಸಾಯಿ ಸಭಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮೊದಲೆ ಹಂತದ ನೀರಾವರಿ ಯೋಜನೆಗೆ 100 ಕೋಟಿ ರೂ ಮಂಜೂರಾತಿ ಸಿಕ್ಕಿದೆ.ನೀರಾವರಿ ವಂಚಿತ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವುದು ಪ್ರಧಾನಿ ಮೋದಿ ಅವರ ಸಂಕಲ್ಪವಾಗಿದೆ ಎಂದರು.

2010ರಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಅಂದಿನ ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರಿಗೆ 0.5 ಟಿಎಂಸಿ ನೀರು ಕೊಡಬೇಕೆಂದು ಮನವಿ ಮಾಡಿದಾಗ 2011 ರಲ್ಲಿ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಗೆ ನೀರು ಹಂಚಿಕೆ ಮಾಡಿದ್ದರು.

ನಾಲ್ಕು ಗ್ರಾಮಗಳಿಗೆ ಸಮೀತವಾಗಿದ್ದ ಯೋಜನೆ ಮರುಪರಿಶೀಲಿಸಿದಾಗ ಅಂದಿನ ಮುಖ್ಯಂಮತ್ರಿ ಜಗದೀಶ ಶೆಟ್ಟರ ತಾಲೂಕಿನ 17 ಗ್ರಾಮಗಳಿಗೆ ಡಿಪಿಆರ್ ಸಿದ್ದಪಡಿಸಿ ಆಡಳಿತಾತ್ಮಕ ಅನುಮೋದನೆ ನೀಡಿದ್ದರು. ನಂತರ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರಕಾರದಲ್ಲಿ ಈ ಯೋಜನೆಗೆ ಅನುಮತಿ ಸಿಗಲಿಲ್ಲ. ಆದರೂ ಪ್ರಯತ್ನ ಬಿಡಲಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿಶೇಷ ಮನವಿ ಮಾಡಿದಾಗ ಅವರು ಈ ಯೋಜನೆಗೆ ಹಸಿರು ನಿಶಾನೆ ತೋರಿಸಿದ್ದಾರೆ ಎಂದರು.

Advertisement

ಚಿಂಚಣಿ ಶ್ರೀ ಅಲ್ಲಮಪ್ರಭು ಸ್ವಾಮೀಜಿ, ಚರಮೂರ್ತಿಮಠದ ಸಂಪಾದನ ಸ್ವಾಮೀಜಿ, ಭರತೇಶ ಬನವಣೆ, ಅಜೀತ ದೇಸಾಯಿ, ಪ್ರವೀಣ ಕಾಂಬಳೆ, ಸತೀಶ ಅಪ್ಪಾಜಿಗೋಳ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next