Advertisement
ಆಟಿ ತಿಂಗಳಲ್ಲಿ ರೈತಾಪಿ ವರ್ಗ ತಮ್ಮ ಕೃಷಿ ಕಾಯಕವನ್ನು ಮುಗಿಸಿ ಧಾರಾಕಾರವಾಗಿ ಸುರಿವ ಮಳೆಗೆ ಮನೆಯೊಳಗಿದ್ದೇ ತಾವು ಬಿತ್ತಿರುವ ಭತ್ತವು ಮುಂದೆ ಉತ್ತಮ ಫಸಲಾಗಲಿ ಎಂದು ಬೇಡಿಕೊಳ್ಳುವ ಕಾಲವಿದು. ಅವರು ಮಳೆಗಾಲದಲ್ಲಿ ನೀರ ತೋಡುಗಳಿಗೆ “ಕಟ್ಟ'(ಒಡ್ಡು)ಗಳನ್ನು ಕಟ್ಟಿಕೊಂಡು ಶ್ರಮವಹಿಸಿ ತಾವು ನೀರೊಡ್ಡುವ ಗದ್ದೆಗಳಿಂದ ಉತ್ತಮ ಫಲ ಬರಲಿ ಎಂದು ಗ್ರಾಮದ ದೈವ, ದೇವರುಗಳನ್ನು ಪ್ರಾರ್ಥಿಸುತ್ತಾರೆ. ಕೃಷಿ ಕಾಯಕಕ್ಕಾಗಿ ಕಟ್ಟಗಳನ್ನು ಕಟ್ಟಿದ ಬಳಿಕ ಈ ಒಡ್ಡುಗಳ ರಕ್ಷಣೆ ಮತ್ತು ಹೇರಳ ನೀರಾಶ್ರಯಕ್ಕಾಗಿ ಗ್ರಾಮ ದೇವರಿಗೆ ಸಮರ್ಪಿತಗೊಳ್ಳುವ ಅಪ್ಪ ಸೇವೆಗೆ “ಕಟ್ಟದಪ್ಪ’ವೆಂಬ ನಾಮಧೇಯವೂ ಪ್ರಚಲಿತವಿದೆ.
ಈ ಕಟ್ಟದಪ್ಪ ಸೇವೆಯ ದಿನ ರಾತ್ರಿ ಪೂಜೆಯ ಸಂದರ್ಭ ಊರ ಪ್ರಮುಖರ ಸಹಿತ ಕೃಷಿಕರೆಲ್ಲರೂ ದೇಗುಲದಲ್ಲಿ ಸೇರುತ್ತಾರೆ. ಸಾಮೂಹಿಕವಾಗಿ ಮಹಾಲಿಂಗೇಶ್ವರ ಹಾಗೂ ಪ್ರಧಾನವಾಗಿ ಮಹಾಗಣಪತಿಗೆ ಧನ ಧಾನ್ಯ ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುತ್ತಾರೆ. ಶ್ರೀ ದೇವರ ಸಮ ರ್ಪಣೆಗಾಗಿ ಬೆಳಿಗ್ಗಿನಿಂದಲೇ ಬಾಣಸಿಗರು ದೊಡ್ಡ, ದೊಡ್ಡ ಬಾಣಲೆಯಲ್ಲಿ ಕಾಯಿಸಿ ತಯಾರಿಸಿ ದೊಡ್ಡ ದೊಡ್ಡ ಕಟಾಹಗಳಲ್ಲಿ ಸಮರ್ಪಣೆಗಾಗಿ ಶ್ರೀ ದೇವರ ಮುಂದಿಡುವ ಅಪ್ಪಗಳನ್ನು “ಕಟಾಹಾಪೂಪ’ವೆಂದೂ ಕರೆಯಲಾಗುತ್ತದೆ. “ಪೊಟ್ಟಪ್ಪ’ ಸೇವೆ ವಿಶೇಷ
ಈ ಸೇವೆಯಲ್ಲದೇ ಪಡುಬಿದ್ರಿ ಗಣಪತಿಗೆ ಪಂಚಕಜ್ಜಾಯ ಸೇವೆ ಅಚ್ಚುಮೆಚ್ಚು. ಬರೀ ತೆಂಗಿನಕಾಯಿ, ಅಕ್ಕಿ, ಉಪ್ಪುಗಳ ಮಿಶ್ರಣದಿಂದ ತಯಾರಿಸುವ “ಪೊಟ್ಟಪ್ಪ’ವೂ ಪಡುಬಿದ್ರಿ ಗಣಪನಿಗೆ ಸಂದಾಯವಾಗುವ ವಿಶೇಷ ಸೇವೆಯಾಗಿದೆ.
Related Articles
ಪಡುಬಿದ್ರಿ ಗಣಪತಿಯನ್ನು ಮನಸಾರೆ ಆರಾಧಿಸುವ ಉದ್ಯಮಪತಿಗಳಿಂದ ತೊಡಗಿ ರಾಜ್ಯ, ದೇಶ ವಿದೇಶಗಳಿಂದಲೂ ಈ ವಿಶೇಷ ಅಪ್ಪ ಸೇವೆಗಾಗಿ ಬೇಡಿಕೆಗಳಿರುತ್ತವೆ. ದಿನನಿತ್ಯದ ಅಪ್ಪ ಸೇವೆಯೂ ಇಲ್ಲಿ ನಡೆಯುತ್ತಲಿದ್ದರೂ ವರ್ಷಕೊಮ್ಮೆ ನಡೆವ ಈ ಕಟ್ಟದಪ್ಪ ಅಥವಾ ಕಟಾಹಾಪೂಪ ಸೇವೆಗೆ ವಿಶೇಷ ಮಹತ್ವವಿದೆ. ಸುಮಾರು 10,000 ಸೇವಾಕರ್ತರು ಈ ಸೇವೆಗಾಗಿ ಪ್ರತೀ ಬಾರಿಯೂ ಕಾದಿರುತ್ತಾರೆ.
Advertisement
ಕಟ್ಟದಪ್ಪ ತಯಾರಿ ಹೇಗೆ?ಸಾರ್ವಜನಿಕ ಅಪ್ಪ ಸೇವೆಯಂದು ಈ ಬಾರಿ 80ಮುಡಿ ಅಕ್ಕಿಯ ಅಪ್ಪವು ಗಣಪತಿಗೆ ಸಮರ್ಪಿತವಾಗಲಿದೆ. ಈ ಅಕ್ಕಿಗೆ 180ಕೆಜಿ ಅರಳು, ಸುಮಾರು 700ಕೆಜಿಗಳಷ್ಟು ಬಾಳೆಹಣ್ಣು, ಸುಮಾರು 2000 ತೆಂಗಿನಕಾಯಿ, 10ಕೆಜಿ ಏಲಕ್ಕಿ, 2.5ಟನ್ ಬೆಲ್ಲದೊಂದಿಗೆ ಮಿಶ್ರಣವನ್ನು ತಯಾರಿಸಿಕೊಂಡು ಸುಮಾರು 50 ಡಬ್ಬಿ ಎಣ್ಣೆಯಿಂದ ಕಬ್ಬಿಣದ ಬಾಣಲೆಗಳಲ್ಲಿ ಅಪ್ಪಗಳನ್ನು ಬೆಳಿಗ್ಗಿಂದ ಸಾಯಂಕಾಲದ ಆರೇಳು ಗಂಟೆಯವರೆಗೂ ಕಾಯಿಸಿ ಸುಮಾರು 1.5ಲಕ್ಷಗಳಷ್ಟು ಅಪ್ಪಗಳನ್ನು ತಯಾರಿಸಲಾಗುತ್ತದೆ. – ಆರಾಮ