ಮಹಾಲಿಂಗಪುರ: ಸಿನಿಮಾ ಒಂದು ಮನರಂಜನಾ ಮಾಧ್ಯಮವಾಗಿದ್ದು, ಇಲ್ಲಿ ಕಥೆ, ಚಿತ್ರಕಥೆ, ಸಂಭಾಷಣೆ ಜೊತೆಗೆ ತಾಂತ್ರಿಕ ಅಂಶಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ನಿರ್ದೇಶಕ ಮಹೇಶ ರಾವಳ ಹೇಳಿದರು.
ಸ್ಥಳೀಯ ಕೆಎಲ್‌ಇ ಸಂಸ್ಥೆಯ ಎಸ್‌ಸಿಪಿ ಕಲಾ,ವಿಜ್ಞಾನ ಹಾಗೂ ಡಿಡಿಎಸ್ ವಾಣಿಜ್ಯ ಮಹಾವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಸಿನಿಮಾ ನಿರ್ಮಾಣದ ತಂತ್ರಗಳು ಮತ್ತು ಸಲಹೆಗಳು ಕುರಿತು ಒಂದು ದಿನದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಚಲನಚಿತ್ರ ನಿರ್ಮಾಣದಲ್ಲಿ ಇಡೀ ತಂಡದ ಪರಿಶ್ರಮ, ಪ್ರತಿಭೆ ಮುಖ್ಯವಾಗಿದೆ ಎಂದರು.
ಪ್ರಸ್ತುತ ದಿನಮಾನಗಳಲ್ಲಿ ಸಾಮಾಜಿಕ ಮೌಲ್ಯಯುಳ್ಳ ಚಿತ್ರಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಿನಿಮಾ ಒಂದು ಪ್ರಬಲವಾದ ಕಲೆಯಾಗಿದೆ. ವಿವಿಧ ಪರಿಣಾಮಗಳ ಮೂಲಕ ಜನರನ್ನು ಆಕರ್ಷಿಸಿ ಮನರಂಜನೆಯನ್ನು ಒದಗಿ ಸುವಲ್ಲಿ ಯಶಸ್ವಿಯಾಗಿದೆ ಎಂದರು.
ಇದನ್ನೂ ಓದಿ :ಬೇಸಿಗೆ ಮುನ್ನ ತಂಪು ಪಾನೀಯಕ್ಕೆ ಮೊರೆ
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ|ಬಿ.ಎಂ.ಪಾಟೀಲ ಮಾತನಾಡಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಪೂಜಾ ಕಲ್ಯಾಣಶೆಟ್ಟಿ, ಉಪನ್ಯಾಸಕ ವಿ.ಎ.ಅಡಹಳ್ಳಿ ಇದ್ದರು.