ಚನ್ನರಾಯಪಟ್ಟಣ (ಶ್ರವಣಬೆಳಗೊಳ): ಮಹಾಮಸ್ತಕಾಭಿಷೇಕ ಮಹೋತ್ಸವ ನಿಮಿತ್ತ ಶ್ರವಣಬೆಳಗೊಳದ ಶ್ರೀ ಕಾನಜಿಯಾತ್ರಿಕಾಶ್ರಮದಲ್ಲಿ ಬುಧವಾರ ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಮೈ ಸ್ಟಾಂಪ್ ಕಾರ್ಯಕ್ರಮದಲ್ಲಿ ವಿಶೇಷ ಅಂಚೆ ಲಕೋಟೆ ಹಾಗೂ ವಿಶೇಷ ದಿನಾಂಕ ಮುದ್ರೆಗಳನ್ನು ಬಿಡುಗಡೆ ಮಾಡಲಾಯಿತು.
ಅಂಚೆ ಲಕೋಟೆ ಬಿಡುಗಡೆ ಮಾಡಿ ಮಾತನಾಡಿದ ಸ್ವಸ್ತೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಸ್ಟಾಂಪ್‌ನಲ್ಲಿ ಸ್ಮತಿ
ಚಿಹ್ನೆ, ರೈಲ್ವೆ ಇಂಜಿನ್ ಮತ್ತು ಮಹಾಮಸ್ತಕಾಭಿಷೇಕ ಮಹೋತ್ಸವ-2018ರ ಲಾಂಛನ ಚಿಹ್ನೆಯಿದ್ದು ಸಾವಿರಾರು
ವರ್ಷದ ಇತಿಹಾಸವನ್ನು ನೆನಪಿಸುತ್ತದೆ ಎಂದು ತಿಳಿಸಿದರು.
ನಂತರ, ದಕ್ಷಿಣ ಕರ್ನಾಟಕ ಪ್ರಾಂತ್ಯದ ಪೋಸ್ಟ್ ಮಾಸ್ಟರ್ ಜನರಲ್ ಎಸ್.ರಾಜೇಂದ್ರಕುಮಾರ್‌ರವರಿಗೆ ಪತ್ರ ಬರೆಯುವ ಮೂಲಕ ವಿಶೇಷವಾಗಿ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಆಹ್ವಾನ ನೀಡಲಾಯಿತು.
ಮಹಾಮಸ್ತಕಾಭಿಷೇಕ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳ ಉಪ ಸಮಿತಿ ಅಧ್ಯಕ್ಷ ಎಸ್.ಎನ್.ಅಶೋಕ್
ಕುಮಾರ್ ಮಾತನಾಡಿದರು.