ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ಆಯುಸ್ಸು, ಆರೋಗ್ಯ ವೃದ್ಧಿಗಾಗಿ ಜ. 17ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ಮಹಾಮೃತ್ಯುಂಜಯ ಹೋಮವನ್ನು ನಡೆಸುವ ಸಂಕಲ್ಪ ಮಾಡಲಾಗಿದೆ.
ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ವೇ|ಮೂ| ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ಪ್ರಧಾನ ಪೌರೋಹಿತ್ಯದಲ್ಲಿ 108 ಋತ್ವಿಜರು ಹೋಮ ನಡೆಸಲಿದ್ದಾರೆ.
ರವಿವಾರ ಸಂಜೆ ಶ್ರೀಕ್ಷೇತ್ರ ಧರ್ಮ ಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀ ರ್ವಾದದೊಂದಿಗೆ ಅಮೃತ ವರ್ಷಿಣಿ ಸಭಾ ಭವನದಲ್ಲಿ ಸಾಮೂ ಹಿಕ ದೇವತಾ ಪ್ರಾರ್ಥನೆ, ಪುಣ್ಯಾ ಹ ವಾಚನ, ಯಾಗ ಮಂಟಪ ಶುದ್ಧಿ, ಕಲಶ ಮಂಡಲ ಪೂಜೆ, ಕಲಶ ಪ್ರತಿ ಷ್ಠಾಪನೆ, ಮಹಾಪೂಜೆ, ಅಷ್ಟಾವ ಧಾನ ಸೇವೆ, ಮಹಾ ಮಂಗಳಾರತಿ ಇತ್ಯಾದಿ ಧಾರ್ಮಿಕ ವಿಧಿಗಳು ನಡೆದವು.
ಸೋಮವಾರ ಬೆಳಗ್ಗೆ 7ರಿಂದ ಚತು ರ್ವೇದ ಪಾರಾಯಣ ಪ್ರಾರಂಭಿಸಿ, ಗೋಪೂಜೆ, ಮಹಾ ಗಣಪತಿ
ಹೋಮ ಬಳಿಕ ಮಹಾ ಮೃತ್ಯುಂಜಯ ಹೋಮ ನಡೆಯಲಿದೆ.
Related Articles
ಸಚಿವರು, ಶಾಸಕರ ಭೇಟಿ
ಗ್ರಾಮೀಣಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಲೋಕೋಪಯೋಗಿ ಖಾತೆ ಸಚಿವ ಸಿ.ಸಿ. ಪಾಟೀಲ್, ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಹಿಂದುಳಿದ ವರ್ಗಗಳ ಕಲ್ಯಾಣ ಖಾತೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಅವಿಭಜಿತ ಜಿಲ್ಲೆಯ ಎಲ್ಲ ಶಾಸಕರು, ವಿವಿಧ ಜಿಲ್ಲೆಗಳ ಬಿಜೆಪಿ ಅಧ್ಯಕ್ಷರು, ಪ್ರಮುಖರು ಭಾಗವಹಿಸಲಿದ್ದಾರೆ.