Advertisement
ವಶಪಡಿಸಿಕೊಂಡ ಒಟ್ಟಾರೆ ಸೊತ್ತುಗಳಲ್ಲಿ ನಗದು, ಹೆಂಡ, ಡ್ರಗ್ಸ್, ಚಿನ್ನಾಭರಣ, ಬೆಳ್ಳಿ ಇನ್ನಿತರ ವಸ್ತುಗಳು ಸೇರಿಕೊಂಡಿವೆ ಎಂದು ರಾಜ್ಯ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಪ್ ಶಿಂಧೆ ಅವರು ತಿಳಿಸಿದ್ದಾರೆ.
ಚುನಾವಣ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಹೆಂಡ, ಮಾದಕ ಪದಾರ್ಥ, ಚಿನ್ನಾಭರಣಗಳಿಗೆ ಸಂಬಂಧಿಸಿದಂತೆ ಪೊಲೀಸ್ ಮತ್ತು ಅಬಕಾರಿ ಇಲಾಖೆಗಳು ಇಲ್ಲಿಯವರೆಗೆ 22,795 ಪ್ರಕರಣಗಳನ್ನು ದಾಖಲಿಸಿಕೊಂಡಿವೆ. 40 ಸಾವಿರಕ್ಕೂ ಅಧಿಕ ಮಾರಕಾಯುಧಗಳನ್ನು ಜಪ್ತಿ ಮಾಡಿರುವ ಅಧಿಕಾರಿಗಳು ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
ಚುನಾವಣ ನೀತಿ ಸಂಹಿತೆ ಜಾರಿಯಾದ ಬಳಿಕ ಸುಮಾರು 30 ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆಯನ್ನು ಪಾಲಿಸದ ಸುಮಾರು 135 ವ್ಯಕ್ತಿಗಳ ಮಾರಕಾಯುಧಗಳ ಲೈಸನ್ಸ್ ಅನ್ನು ರದ್ದುಗೊಳಿಸಲಾಗಿದೆ. ಅನಧಿಕೃತ ಮಾರಕಾಯುಧಗಳನ್ನು ಹೊಂದಿದ್ದ 1,571 ಮಂದಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. 566 ಕಾಡತೂಸು, 18,513 ಜಿಲೆಟಿನ್ ಮಾದರಿಯ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಜ್ಯ ಚುನಾವಣ ಆಯೋಗದ ಹೆಚ್ಚುವರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲೀಪ್ ಶಿಂಧೆ ಅವರು ತಿಳಿಸಿದ್ದಾರೆ.