Advertisement

ಮಹಾರಾಷ್ಟ್ರ : ಕಾರ್ಖಾನೆಯ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವು, ನಾಲ್ಕು ಮಂದಿಗೆ ಗಾಯ

07:24 PM Apr 17, 2021 | Team Udayavani |

ಥಾಣೆ: ಭಿವಂಡಿಯಲ್ಲಿ ವಿದ್ಯುತ್‌ ಕೈಮಗ್ಗ ಕಾರ್ಖಾನೆಯ ಗೋಡೆ ಕುಸಿದು ಬಿದ್ದು ಮೂವರು ಕಾರ್ಮಿಕರು ಅಸುನೀಗಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಶುಕ್ರವಾರ ಸಂಜೆ 4.30ಕ್ಕೆ ಈ ದುರ್ಘ‌ಟನೆ ನಡೆದಿದೆ. ಗೋಡೆಯ ದುರಸ್ತಿ ಕೆಲಸ ನಡೆಯುತ್ತಿದ್ದಾಗ ಅದು ಕುಸಿದು ಬಿದ್ದಿದೆ. ಹೀಗಾಗಿ ಮೂವರು ಜೀವಂತವಾಗಿ ಅವಶೇಷಗಳ ಎಡೆಯಲ್ಲಿ ಸಿಕ್ಕಿ ಹಾಕಿಕೊಂಡು ಕೊನೆಯುಸಿರೆಳೆದಿದ್ದಾರೆ ಎಂದು ಥಾಣೆ ಮಹಾನಗರ ಪಾಲಿಕೆಯ ಪ್ರಾದೇಶಿಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಂತೋಷ್‌ ಕದಂ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಕೋವಿಡ್ ನಿಯಂತ್ರಣಕ್ಕೆ ಸರಕಾರದ ಮಾರ್ಗಸೂಚಿ ಪಾಲಿಸಿ, ತಪ್ಪಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ

 

Advertisement
Advertisement

Udayavani is now on Telegram. Click here to join our channel and stay updated with the latest news.

Next