Advertisement

ಜೂನ್ 7ರಿಂದ ಐದು ಹಂತಗಳಲ್ಲಿ ಕೋವಿಡ್ 19 ಲಾಕ್ ಡೌನ್ ತೆರವು: ಮಹಾರಾಷ್ಟ್ರ ಸರ್ಕಾರ

11:33 AM Jun 05, 2021 | Team Udayavani |

ಮಹಾರಾಷ್ಟ್ರ: ಕೋವಿಡ್ 19 ಸೋಂಕು ಇಳಿಮುಖವಾದ ಹಿನ್ನೆಲೆಯಲ್ಲಿ ಸೋಮವಾರ(ಜೂನ್ 07)ದಿಂದ ಕೋವಿಡ್ 19 ಲಾಕ್ ಡೌನ್ ನಿರ್ಬಂಧಗಳನ್ನು ರಾಜ್ಯದಲ್ಲಿ ಐದು ಹಂತಗಳಲ್ಲಿ ತೆರವುಗೊಳಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ(ಜೂನ್ 04) ಘೋಷಿಸಿದೆ.

Advertisement

ಇದನ್ನೂ ಓದಿ:ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಎಸ್ಎಸ್ಎಲ್ ಸಿ ಅಂಕವೂ ಪರಿಗಣನೆ: ಸುರೇಶ್ ಕುಮಾರ್

ರಾಜ್ಯದಲ್ಲಿ ಐದು ಹಂತಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲು ರಾಜ್ಯ ಸರ್ಕಾರ ಯೋಜನೆ ಸಿದ್ಧಪಡಿಸಿದ್ದು, ಇದನ್ನು ಸೋಮವಾರ(ಜೂನ್ 07)ದಿಂದ ಅನುಷ್ಠಾನಕ್ಕೆ ತರುವುದಾಗಿ ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಕೋವಿಡ್ 19 ಪಾಸಿಟಿವಿಟಿ ದರ ಮತ್ತು ಆಕ್ಸಿಜನ್, ಬೆಡ್ ಗಳ ಲಭ್ಯತೆಯ ಆಧಾರದ ಮೇಲೆ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುವುದು ಎಂದು ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ವಿವರಣೆ ನೀಡಿದೆ. ಆಯಾ ಜಿಲ್ಲೆಯ ಅಧಿಕಾರಿಗಳು ಕೋವಿಡ್ 19 ಪರಿಸ್ಥಿತಿಯನ್ನು ಪರಿಶೀಲಿಸಿ ನಿರ್ಬಂಧ ಸಡಿಲಿಕೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಗುರುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದ ಪರಿಹಾರ ಮತ್ತು ಪುನರ್ವಸತಿ ಖಾತೆ ಸಚಿವ ವಿಜಯ್ ವಾಡೆಟ್ಟಿವಾರ್, ಮೊದಲ ಹಂತದಲ್ಲಿ 18 ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲಿದ್ದೇವೆ. ಎರಡನೇ ಹಂತದಲ್ಲಿ ಐದು, ಮೂರನೇ ಹಂತದಲ್ಲಿ 10 ಜಿಲ್ಲೆಗಳು ಮತ್ತು ನಾಲ್ಕನೇ ಹಂತದಲ್ಲಿ 2 ಹಾಗೂ ಐದನೇ ಹಂತದಲ್ಲಿ ಉಳಿದ ಜಿಲ್ಲೆಗಳಲ್ಲಿನ ಲಾಕ್ ಡೌನ್ ತೆರವುಗೊಳಿಸಲಾಗುವುದು ಎಂದು ತಿಳಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next