ನವದೆಹಲಿ:ರಾಜ್ಯದಲ್ಲಿ ನೂತನ ರೂಪಾಂತರ ಡೆಲ್ಟಾ ಪ್ಲಸ್ ಸೋಂಕಿಗೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಲಾಕ್ ಡೌನ್ ಸಡಿಲಿಕೆ ನಿರ್ಬಂಧವನ್ನು ಕಠಿಣಗೊಳಿಸಲು ನಿರ್ಧರಿಸಿರುವುದಾಗಿ ಶುಕ್ರವಾರ(ಜೂನ್ 25) ಘೋಷಿಸಿದೆ.
ಇದನ್ನೂ ಓದಿ:ನಟಿ ಮಿನಿಶಾ ಮೇಲೆ ಹಣ ಕಳುವು ಆರೋಪ ಕೇಳಿ ಬಂದಿತ್ತು: ಅಷ್ಟಕ್ಕೂ ಅಂದು ನಡೆದಿದ್ದೇನು ?
ಮಹಾರಾಷ್ಟ್ರದಲ್ಲಿ ಡೆಲ್ಟಾ , ಡೆಲ್ಟಾ ಪ್ಲಸ್ ರೂಪಾಂತರ ಸೋಂಕು ಹಾಗೂ ಕೋವಿಡ್ 3ನೇಯ ಅಲೆಯ ಸಾಧ್ಯತೆ ಇದೆ ಎಂಬ ವರದಿಯ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಟ್ಟು 20 ಡೆಲ್ಟಾ ಪ್ಲಸ್ ರೂಪಾಂತರ ಪ್ರಕರಣ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.
ನಿರ್ಬಂಧ ಸಡಿಲಿಕೆಯಿಂದ ಅಪಾಯ ಎದುರಿಸಲು ಸಾಧ್ಯವಿಲ್ಲ, ಅಲ್ಲದೇ ಕ್ಷಿಪ್ರ ಆ್ಯಂಟಿಜೆನ್ ಪರೀಕ್ಷೆಗಿಂತ ಒಟ್ಟು ಆರ್ ಟಿ ಪಿಸಿಆರ್ ಪರೀಕ್ಷೆಗಳು ನಿರ್ಣಾಯಕ ಅಂಶವಾಗಲಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. ರಾಜ್ಯದಲ್ಲಿ ಅತೀ ಹೆಚ್ಚು ಲಸಿಕೆ ನೀಡಿಕೆಗೆ ಹೆಚ್ಚು ಆದ್ಯತೆ ನೀಡುವುದಾಗಿ ಸರ್ಕಾರ ತಿಳಿಸಿದೆ.
ಪುಣೆ, ಥಾಣೆಯಲ್ಲಿ ಜಿಲ್ಲಾಡಳಿತ ಕನಿಷ್ಠ ಮೂರು ಹಂತದ ನಿರ್ಬಂಧಗಳನ್ನು ಮುಂದುವರಿಸಿದೆ. ಮಾಲ್ಸ್, ಸಾರ್ವಜನಿಕ ಸ್ಥಳಗಳನ್ನು ತೆರೆಯಬಹುದು ಎಂಬ ಈ ಮೊದಲಿನ ಆದೇಶವನ್ನು ತಡೆಹಿಡಿಯಲಾಗಿದೆ ಎಂದು ತಿಳಿಸಿದೆ. ಎಲ್ಲಾ ಅಂಗಡಿಗಳು, ಸಾರ್ವಜನಿಕ ಸ್ಥಳಗಳನ್ನು ಸಂಜೆ 4ಗಂಟೆವರೆಗೆ ಬಂದ್ ಮಾಡುವಂತೆ ಆದೇಶ ಹೊರಡಿಸಿದೆ.