Advertisement

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

08:58 PM Nov 17, 2024 | Team Udayavani |

ಅಮರಾವತಿ: ಸಾರ್ವಜನಿಕ ಸಭೆಗೆ ಆಗಮಿಸಿದ ಬಿಜೆಪಿ ಮಾಜಿ ಸಂಸದೆ ನವನೀತ್ ರಾಣಾ ಮತ್ತು ಅವರ ಬೆಂಬಲಿಗರ ಮೇಲೆ ಜನರ ಗುಂಪು ಹಲ್ಲೆ ನಡೆಸಿದೆ. ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಖಲ್ಲಾರ್ ಗ್ರಾಮದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ.

Advertisement

ಘಟನೆಗೆ ಸಂಬಂಧಿಸಿದಂತೆ ಪೊಲೀಸರು 45 ಮಂದಿ ವಿರುದ್ಧ ಎಫ್‌ ಐಆರ್‌ (ಪ್ರಥಮ ವರ್ತಮಾನ ವರದಿ) ದಾಖಲಿಸಿದ್ದಾರೆ ಮತ್ತು ಅವರಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ರಾತ್ರಿ 10 ಗಂಟೆ ಸುಮಾರಿಗೆ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲು ನವನೀತ್‌ ರಾಣಾ ತನ್ನ ಬೆಂಬಲಿಗರೊಂದಿಗೆ ಆಗಮಿಸಿದಾಗ ಜನರ ಗುಂಪಿನಲ್ಲಿದ್ದ ಕೆಲವರು ಆಕ್ಷೇಪಾರ್ಹ ಪದಗಳನ್ನು ಬಳಸಿದ್ದು, ಅಶ್ಲೀಲ ಸನ್ನೆ ಮಾಡಿದ್ದಾರೆ. ಈ ವೇಳೆ ಆಕೆಯ ಬೆಂಬಲಿಗರು ಹಾಗೂ ಗುಂಪಿನಲ್ಲಿದ್ದ ಆರೋಪಿಗಳೊಂದಿಗೆ ಘರ್ಷಣೆ ನಡೆದಿದ್ದು, ನವನೀತ್ ರಾಣಾ ಮತ್ತು ಅವರ ಬೆಂಬಲಿಗರ ಮೇಲೆ ಕುರ್ಚಿಗಳನ್ನು ಎಸೆದಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲʼ ಎಂದು ಅಮರಾವತಿ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ವಿಶಾಲ್ ಆನಂದ್ ಹೇಳಿದ್ದಾರೆ.


ಭಾರತೀಯ ನ್ಯಾಯ ಸಂಹಿತಾ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಗಲಭೆ, ಕೊಲೆ ಯತ್ನ ಮತ್ತಿತರ ನಿಬಂಧನೆಗಳ ಅಡಿಯಲ್ಲಿ 40-45 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಶಂಕಿತ ನಾಲ್ವರ ಬಂಧಿಸಲಾಗಿದೆ  ಎಂದು ತಿಳಿಸಿದರು.

Advertisement

ನವನೀತ್‌  ರಾಣಾ ನಂತರ ಸಮೀಪದ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿ “ಸಭೆಯಲ್ಲಿ ಭಾಷಣ ಮಾಡುತ್ತಿದ್ದಾಗ ಜನರ ಗುಂಪಿನಲ್ಲಿದ್ದ ನಿರ್ದಿಷ್ಟ ಸಮುದಾಯದ ಗುಂಪು ಆಕ್ಷೇಪಾರ್ಹ ಪದಗಳ ಬಳಸಿ, ಅಲ್ಲಾ ಹು ಅಕ್ಬರ್‌ ಘೋಷಣೆ ಕೇಳಲಾರಂಭವಾಯಿತು. ಆಗ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಉದ್ರಿಕ್ತ ಮಂದಿ ಕುರ್ಚಿಗಳ ಎಸೆಯಲಾರಂಭಿಸಿದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರಾಣಾ ಅವರನ್ನು ರಕ್ಷಕರ ಸಹಾಯಕರೊಂದಿಗೆ ಕರೆದೊಯ್ಯಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next