Advertisement

Maharashtra; ಡಿ.11 ಅಥವಾ 12 ರಂದು ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

05:56 PM Dec 06, 2024 | Team Udayavani |

ಮುಂಬಯಿ: ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರಕಾರದ ಸಂಪುಟ ವಿಸ್ತರಣೆ ಡಿಸೆಂಬರ್ 11 ಅಥವಾ 12 ರಂದು ನಡೆಯಲಿದೆ ಎಂದು ಮೂಲಗಳು ಶುಕ್ರವಾರ(ಡಿ6) ತಿಳಿಸಿವೆ.

Advertisement

ಹಿಂದಿನ ಏಕನಾಥ್ ಶಿಂಧೆ ನೇತೃತ್ವದ ಸರಕಾರದಂತೆಯೇ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಹಣಕಾಸು, ಬಿಜೆಪಿ ಗೃಹ ಖಾತೆಯನ್ನು ಉಳಿಸಿಕೊಳ್ಳುವ ಎಲ್ಲಾ ಸಾಧ್ಯತೆಗಳಿವೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

ಶಿಂಧೆ ನೇತೃತ್ವದ ಶಿವಸೇನೆಯ ಮೂಲಗಳನ್ನು ನಂಬುವುದಾದರೆ ನಗರಾಭಿವೃದ್ಧಿ ಖಾತೆ ಉಳಿಸಿಕೊಳ್ಳಬಹುದು.ಮಹಾರಾಷ್ಟ್ರದ ಕ್ಯಾಬಿನೆಟ್ ನಲ್ಲಿ ಮುಖ್ಯಮಂತ್ರಿ ಸೇರಿದಂತೆ ಗರಿಷ್ಠ 43 ಮಂದಿ ಮಂತ್ರಿಗಳಾಗಬಹುದು.

ಮಹಾಯುತಿ ಮೈತ್ರಿಕೂಟದ ಅತಿದೊಡ್ಡ ಪಕ್ಷ ಬಿಜೆಪಿಗೆ 21-22 ಸಚಿವ ಸ್ಥಾನಗಳು ಸಿಗುವ ನಿರೀಕ್ಷೆಯಿದೆ. ಶಿವಸೇನೆ 11 ರಿಂದ 12 ಸಚಿವ ಸ್ಥಾನಗಳು ಮತ್ತು ಎನ್‌ಸಿಪಿಗೆ 9 ರಿಂದ 10 ಸ್ಥಾನಗಳನ್ನು ಪಡೆಯಬಹುದು ಎಂದು ಮೂಲಗಳು ತಿಳಿಸಿವೆ.

ಪ್ರಮಾಣ ವಚನ ಸ್ವೀಕರಿಸುವ ಸಚಿವರ ಸಂಖ್ಯೆ ಇನ್ನೆರಡು ದಿನದಲ್ಲಿ ಅಂತಿಮ ನಿರ್ಧಾರವಾಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

Advertisement

ಶನಿವಾರದಿಂದ ಆರಂಭವಾಗಲಿರುವ ಮೂರು ದಿನಗಳ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಲಂಬ್ಕರ್ ಅವರು ನೂತನವಾಗಿ ಆಯ್ಕೆಯಾದ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಸ್ಪೀಕರ್ ಚುನಾವಣೆ ಸೋಮವಾರ(ಡಿ) ನಡೆಯಲಿದೆ, ನಂತರ ನೂತನ ಸರಕಾರ ವಿಶ್ವಾಸ ಮತ ಮತ್ತು ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.

ಡಿಸೆಂಬರ್ 16 ರಿಂದ ರಾಜ್ಯದ ಎರಡನೇ ರಾಜಧಾನಿ ನಾಗ್ಪುರದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next