ಮುಂಬೈ: ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರಕಾರದ ಸಂಪುಟ ವಿಸ್ತರಣೆಯು ನಾಗ್ಪುರದಲ್ಲಿ ಡಿಸೆಂಬರ್ 15 ರಂದು ನಡೆಯಲಿದೆ ಎಂದು ಅಧಿಕೃತ ಮೂಲಗಳು ಶುಕ್ರವಾರ(ಡಿ13) ತಿಳಿಸಿವೆ.
ಸುಮಾರು 30 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಒಂದು ವಾರದ ಅವಧಿಯ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಮಹಾರಾಷ್ಟ್ರದ ಎರಡನೇ ರಾಜಧಾನಿ ನಾಗ್ಪುರದಲ್ಲಿ ಡಿಸೆಂಬರ್ 16 ರಿಂದ ಪ್ರಾರಂಭವಾಗಲಿದೆ.
ಡಿಸೆಂಬರ್ 5 ರಂದು ಮುಂಬೈನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಿ, ಶಿವಸೇನಾ ನಾಯಕ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಡಿಸಿಎಂ ಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಮಹಾರಾಷ್ಟ್ರದ ಸಚಿವ ಸಂಪುಟವು ಮುಖ್ಯಮಂತ್ರಿ ಸೇರಿದಂತೆ ಗರಿಷ್ಠ 43 ಸದಸ್ಯರನ್ನು ಹೊಂದಬಹುದಾಗಿದೆ. ಕೆಲ ಸ್ಥಾನಗಳನ್ನು ಖಾಲಿ ಇಡುವ ಸಾಧ್ಯತೆಗಳಿವೆ.