ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸೋಮವಾರ ಭೇಟಿ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು ಶ್ರೀ ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥಿಸಿದರು. ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಆಶೀರ್ವಾದ ಪಡೆದರು.
ಬೆಳ್ತಂಗಡಿ ಕ್ಷೇತ್ರದ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ಸ್ವಾಗತಿಸಿದರು. ಧರ್ಮಸ್ಥಳ ಕ್ಷೇತ್ರದ ಪರವಾಗಿ ಡಿ.ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಡಾ| ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಏಕನಾಥ ಶಿಂಧೆ ಅವರನ್ನು ಗೌರವಿಸಿದರು.
ಕ್ಷೇತ್ರದಿಂದ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ ಕಚೇರಿ ಪ್ರಬಂಧಕ ಪಾರ್ಶ್ವನಾಥ ಜೈನ್, ದೀಕ್ಷಿತ್, ಪಾರುಪತ್ಯಗಾರ ಲಕ್ಷಿ ನಾರಾಯಣ ರಾವ್, ಮಹಾವೀರ ಅಜ್ರಿ, ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಮಂಡಲ ಕಾರ್ಯದರ್ಶಿ ಶ್ರೀನಿವಾಸ ರಾವ್, ಸುರೇಶ್ ಶೆಟ್ಟಿ ಮುಂಗೇಲು ಮೊದಲಾದವರು ಇದ್ದರು. ಬಳಿಕ ಉಡುಪಿಗೆ ತೆರಳಿದರು.