Advertisement

ಕೋವಿಡ್ ನಿಯಂತ್ರಣ: ಮಹಾರಾಷ್ಟ್ರದಲ್ಲಿ ಮೇ 15ರವರೆಗೂ ಲಾಕ್ ಡೌನ್ ವಿಸ್ತರಣೆ ಸಾಧ್ಯತೆ

11:40 AM Apr 29, 2021 | Team Udayavani |

ಮುಂಬಯಿ: ಕೋವಿಡ್ 19 ಸೋಂಕು ಕ್ಷಿಪ್ರವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಮಾದರಿಯ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿದ್ದ ಮಹಾರಾಷ್ಟ್ರ ಸರಕಾರ ಏಪ್ರಿಲ್ 30ರ ನಂತರವೂ 15 ದಿನಗಳ ಕಾಲ ನಿರ್ಬಂಧ ವಿಸ್ತರಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

Advertisement

ಮಹಾರಾಷ್ಟ್ರ ಸರಕಾರ ಮೇ 15ರವರೆಗೆ ಪೂರ್ಣ ಲಾಕ್ ಡೌನ್ ಆದೇಶವನ್ನು ವಿಸ್ತರಿಸಲು ನಿರ್ಧರಿಸುವ ಸಾಧ್ಯತೆ ಇದ್ದಿರುವುದಾಗಿ ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ ಮುನ್ಸೂಚನೆ ನೀಡಿರುವುದಾಗಿ ವರದಿ ವಿವರಿಸಿದೆ.

ಬುಧವಾರ(ಏ.28) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ ಸಮಯದ ನಿಗದಿ ಬಗ್ಗೆ ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕು. ಲಾಕ್ ಡೌನ್ ವಿಸ್ತರಿಸುವ ಬಗ್ಗೆ ಇನ್ನು ಎರಡು ದಿನಗಳಲ್ಲಿ ಮಹಾರಾಷ್ಟ್ರ ಸರಕಾರ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಟೋಪೆ ತಿಳಿಸಿದ್ದಾರೆ.

ಜನರ ಓಡಾಟವನ್ನು ನಿರ್ಬಂಧಿಸಲು ಹಾಗೂ ಇತರ ಚಟುವಟಿಕೆ ಬಂದ್ ಮಾಡುವಂತೆ ಏಪ್ರಿಲ್ 14ರಿಂದ 30ರವರೆಗೆ ಕಠಿಣ ಮಾರ್ಗಸೂಚಿ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ತುರ್ತು ಸೇವೆಗಳಿಗೆ ಅವಕಾಶ ನೀಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next