Advertisement

ಕೋವಿಡ್ ಸೋಂಕು ಹೆಚ್ಚಳ: ಮಹಾರಾಷ್ಟ್ರ ಸತಾರಾ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ

08:14 PM Jul 06, 2021 | Team Udayavani |

ನವದೆಹಲಿ: ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಜುಲೈ 11ರಿಂದ ಸತಾರಾ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ಮಂಗಳವಾರ (ಜುಲೈ 06) ನಿರ್ಧರಿಸಿದೆ.

Advertisement

ಅಧಿಕಾರಿಗಳು ಹೊರಡಿಸಿರುವ ಆದೇಶದ ಪ್ರಕಾರ, ಜಿಲ್ಲೆಯಲ್ಲಿ ನಾಲ್ಕನೇ ಹಂತದ ನಿರ್ಬಂಧ ಜಾರಿಗೊಳಿಸಲಿದ್ದು, ಈ ಸಂದರ್ಭದಲ್ಲಿ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು, ಉಳಿದ ಎಲ್ಲಾ ವಹಿವಾಟುಗಳು ಮುಂದಿನ ಎಂಟು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಆಗಿರಲಿದೆ ಎಂದು ತಿಳಿಸಿದೆ.

ಆದೇಶದ ಪ್ರಕಾರ, ಸೋಮವಾರದಿಂದ ಶುಕ್ರವಾರದವರೆಗೆ ನಿರ್ಬಂಧ ಜಾರಿಯಲ್ಲಿರಲಿದ್ದು, ಶನಿವಾರ ಮತ್ತು ಭಾನುವಾರ ಜಿಲ್ಲೆಯಲ್ಲಿ ಸಂಪೂರ್ಣವಾಗಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ವಿವರಿಸಿದೆ.

ಅಗತ್ಯ ವಸ್ತುಗಳ ಮಾರಾಟದ ಅಂಗಡಿಗಳು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ಇದರಲ್ಲಿ ಜಿನಸಿ ಅಂಗಡಿ, ತರಕಾರಿ ಅಂಗಡಿ, ಹಣ್ಣು ಮಾರಾಟ, ಬೇಕರಿ, ಮಟನ್, ಚಿಕನ್, ಮೊಟ್ಟೆ, ಮೀನು ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೇ ಆಸ್ಪತ್ರೆಗಳು, ಮೆಡಿಕಲ್, ಲಸಿಕೆ ಕೇಂದ್ರಗಳು , ಇನ್ಸೂರೆನ್ಸ್ ಕಚೇರಿಗಳು ಕಾರ್ಯನಿರ್ವಹಿಸಲಿದೆ ಎಂದು ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next