Advertisement

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

05:17 AM Nov 28, 2024 | Team Udayavani |

ಮುಂಬಯಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾವಿಕಾಸ ಅಘಾಡಿ ಸೋಲಿಗೆ ವಿದ್ಯುನ್ಮಾನ ಮತಯಂತ್ರಗಳೇ ಪ್ರಮುಖ ಕಾರಣ ಎಂದು ಅಘಾಡಿ ಆರೋಪಿಸಿದೆ. ಹೀಗಾಗಿ ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

Advertisement

ಅಲ್ಲದೆ ಎಲ್ಲ ವಿವಿ ಪ್ಯಾಟ್‌ಗಳನ್ನು ಮರುಪರಿಶೀಲನೆ ನಡೆಸಬೇಕು ಎಂದು ಸೋತಿರುವ ಅಘಾಡಿ ಅಭ್ಯರ್ಥಿಗಳು ಚುನಾವಣ ಆಯೋಗಕ್ಕೆ ಮನವಿ ಮಾಡಲಿದ್ದಾರೆ. ಮಂಗಳವಾರ ಉದ್ಧವ್‌ ಠಾಕ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸೋತ ಎಲ್ಲ ಅಭ್ಯರ್ಥಿಗಳು ಇವಿಎಂ ತಿರುಚಿದ್ದೇ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆಗೆ ಚಿಂತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇವಿಎಂ ವಿರುದ್ಧ ಕಾನೂನು ಹೋರಾಟ ನಡೆಸಲು ಬೇಕಾಗಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಿದ್ಧತೆ ಕೈಗೊಳ್ಳಲಾಗಿದೆ. ಇದರ ಜತೆಗೆ ಶಿವಸೇನೆ(ಯುಬಿಟಿ)ಯ ಮುಖವಾಣಿಯಾದ ಸಾಮ್ನಾ, ಮಹಾ ರಾಷ್ಟ್ರದಲ್ಲಿ ಮಹಾಯುತಿಗೆ ಸಿಕ್ಕ ಗೆಲುವು ಒಂದು ರೀತಿಯಲ್ಲಿ ಬಂಪರ್‌ ಲಾಟರಿ ಇದ್ದಂತೆ. ಇದು ಇವಿಎಂ ಬಗ್ಗೆ ಅನುಮಾನ ಮೂಡಿಸಿದೆ. ಇವಿಎಂ ಇದ್ದರೆ ಈ ದೇಶದಲ್ಲಿ ಎಲ್ಲವೂ ಸಾಧ್ಯ ಎಂದು ಹೇಳಿದೆ. ಈ ಮೂಲಕ ಇವಿಎಂ ತಿರುಚುವಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next