ಮುಂಬಯಿ: ಕೋವಿಡ್ 19 ಸೋಂಕು ಕ್ಷಿಪ್ರವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಜಾರಿಯಾಗಿರುವ ಕೋವಿಡ್ 19 ಲಾಕ್ ಡೌನ್ ಅನ್ನು ಜೂನ್ 1ರವರೆಗೆ ವಿಸ್ತರಿಸಿರುವುದಾಗಿ ಮಹಾರಾಷ್ಟ್ರ ಸರ್ಕಾರ ಗುರುವಾರ(ಮೇ 13) ತಿಳಿಸಿದೆ.
ಇದನ್ನೂ ಓದಿ:ಸರ್ವಾಧಿಕಾರಿ ಧೋರಣೆಗೆ ಆಕ್ರೋಶ: ಉನ್ನಾವ್ ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ
ಕೋವಿಡ್ ಸೋಂಕಿಗೆ ಕಡಿವಾಣ ಹಾಕಲು ಮಹಾರಾಷ್ಟ್ರ ಸರ್ಕಾರ ಇನ್ನಷ್ಟು ಹೆಚ್ಚುವರಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಲು ನಿರ್ಧರಿಸಿದೆ ಎಂದು ವರದಿ ಹೇಳಿದೆ. ರಾಜ್ಯಕ್ಕೆ ಆಗಮಿಸುವ ಪ್ರತಿಯೊಬ್ಬರು ಆರ್ ಟಿಪಿಸಿಆರ್ ನೆಗೆಟಿವ್ ವರದಿ ತರುವುದು ಕಡ್ಡಾಯ ಎಂದು ತಿಳಿಸಿದೆ.
ರಾಜ್ಯಕ್ಕೆ ಆಗಮಿಸುವ 48ಗಂಟೆ ಮೊದಲು ಪರೀಕ್ಷಿಸಿದ ಆರ್ ಟಿಪಿಸಿಆರ್ ವರದಿ ಅಗತ್ಯ. ಸರಕು ಸಾಗಣೆ ವಾಹನದಲ್ಲಿಯೂ ಇಬ್ಬರಿಗಿಂತ ಹೆಚ್ಚು ಮಂದಿ ಪ್ರಯಾಣಿಸಲು ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ನಿರ್ದೇಶನ ನೀಡಿದೆ.
ರಾಜ್ಯದಲ್ಲಿ ಕೋವಿಡ್ 19 ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದ್ದ ಪರಿಣಾಮ ಏಪ್ರಿಲ್ 5ರಿಂದ ಲಾಕ್ ಡೌನ್ ಮಾದರಿಯ ಕರ್ಫ್ಯೂ ಜಾರಿಗೊಳಿಸಿತ್ತು. ಏಪ್ರಿಲ್ 15ರಿಂದ ಭಾರತೀಯ ಅಪರಾಧ ದಂಡ ಸಂಹಿತೆ ಸೆಕ್ಷನ್ 144 ಅನ್ನು ರಾಜ್ಯಾದ್ಯಂತ ಜಾರಿಗೊಳಿಸಿತ್ತು.