ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳನ್ನು ದಾಖಲಿಸಿಕೊಳ್ಳುತ್ತಿಲ್ಲ ಹಾಗೂ ಕೋವಿಡ್ ರೋಗಿಗಳಿಂದ ಹೆಚ್ಚಿನ ಮಟ್ಟದಲ್ಲಿ ಸುಲಿಗೆ ಮಾಡಲಾಗುತ್ತಿದೆ ಎಂಬಿತ್ಯಾದಿ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಉಗ್ರ ಕ್ರಮ ಕೈಗೊಂಡಿರುವ ಮಹಾರಾಷ್ಟ್ರ ಸರಕಾರ, ಅಲ್ಲಿನ ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳಲ್ಲಿರುವ ಶೇ. 80ರಷ್ಟು ಹಾಸಿಗೆಗಳನ್ನು ಹಾಗೂ ಅವುಗಳ ಐಸಿಯುಗಳಲ್ಲಿರುವ ಶೇ. 100ರಷ್ಟು ಹಾಸಿಗೆಗಳನ್ನು ಸರ್ಕಾರ ತನ್ನ ಸ್ವಾಧೀನಕ್ಕೆ ತೆಗೆದುಕೊಂಡಿದೆ. ಜೊತೆಗೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡುವ ಕೋವಿಡ್ ಸಂಬಂಧಿ ಪರೀಕ್ಷೆಗಳು, ಚಿಕಿತ್ಸೆಗಳ ಶುಲ್ಕಕ್ಕೆ ಕಡಿವಾಣ ಹಾಕಿದೆ. ಶೇ. 20ರಷ್ಟು ಹಾಸಿಗೆಗಳಿಗೆ ದಾಖಲಾಗುವ ರೋಗಿಗಳಿಗೆ ಮಾತ್ರ ಖಾಸಗಿ ಆಸ್ಪತ್ರೆಗಳು ಶುಲ್ಕ ವಿಧಿಸಬಹುದು. ಇನ್ನುಳಿದ ಶೇ. 80ರಷ್ಟು ಹಾಸಿಗೆಗಳನ್ನು, ಐಸಿಯುನ ಶೇ. 100ರಷ್ಟು ಹಾಸಿಗೆಗಳನ್ನು ಸರ್ಕಾರಿ ಆಸ್ಪತ್ರೆಗಳಿಂದ ಶಿಫಾರಸುಗೊಂಡ ರೋಗಿಗಳಿಗೆ ಮೀಸಲಿಡಬೇಕಿದೆ.