Advertisement

ಒಮಿಕ್ರಾನ್‌ ಎಫೆಕ್ಟ್: ಮಹಾರಾಷ್ಟ್ರದಲ್ಲಿ ಮತ್ತೆ ಟೈಟ್‌ ರೂಲ್ಸ್‌

11:49 PM Nov 27, 2021 | Team Udayavani |

ಮುಂಬಯಿ: ದಕ್ಷಿಣ ಆಫ್ರಿಕ ಸೇರಿ ಅನೇಕ ರಾಷ್ಟ್ರಗಳಲ್ಲಿ ಕೊರೊನಾದ ಒಮಿಕ್ರಾನ್‌ ರೂಪಾಂತರಿ ಹೆಚ್ಚಲಾ ರಂಭಿಸಿರುವ ಬೆನ್ನಲ್ಲೇ ಭಾರತದಲ್ಲೂ ಕಠಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚಿಸಿದೆ.

Advertisement

ಆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರವು ನೂತನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಕಠಿನ ನಿಯಮ ಪಾಲನೆಗೆ ಮುಂದಾಗಿದೆ.

ರಾಜ್ಯಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರು ಕೇಂದ್ರ ಸರಕಾರ ಸೂಚಿಸಿರುವ ಎಲ್ಲ ನಿಯಮಗಳಿಗೆ ಬದ್ಧರಾಗಿರಬೇಕು.

ದೇಶೀಯ ಪ್ರಯಾಣಿಕರು ಸಂಪೂರ್ಣ ಲಸಿಕೆ ಪಡೆದವರಾಗಿರಬೇಕು ಅಥವಾ 72 ಗಂಟೆಗಳೊಳಗೆ ಮಾಡಿಸಿರುವ ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿ ಹೊಂದಿರಬೇಕು.

ಇದನ್ನೂ ಓದಿ:ಹೊಸ ರೂಪಾಂತರಿಯಿಂದ ಆತಂಕ :  ಹಲವು ದೇಶಗಳಲ್ಲಿ ಕಟ್ಟೆಚ್ಚರ, ವಿಮಾನಯಾನಕ್ಕೆ ನಿಷೇಧ

Advertisement

ಕಾರು, ಬಸ್‌, ಕಚೇರಿ ಸೇರಿ ಯಾವುದೇ ಪ್ರದೇಶದಲ್ಲಿಯೂ ಕೊರೊನಾ ನಿಯಮ ಉಲ್ಲಂಘನೆ ಮಾಡುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದಲ್ಲಿ, 500 ರೂ.ನಿಂದ 50,000 ರೂ.ವರೆಗಿನ ದಂಡ ವಿಧಿಸಲಾಗುವುದು. ಹಾಗೆಯೇ ಸಾರ್ವಜನಿಕ ಸಾರಿಗೆಗಳನ್ನು ಬಳಸುವುದಕ್ಕೆ ಸಂಪೂರ್ಣ ಲಸಿಕೆ ಪಡೆದವರಿಗೆ ಮಾತ್ರ ಅವಕಾಶ.

ಯಾವುದೇ ಕಾರ್ಯಕ್ರಮ, ಸಿನೆಮಾ ಮಂದಿರಗಳಲ್ಲಿ ಶೇ.50 ಆಸನ ಭರ್ತಿ ಮಾಡುವುದಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಸಂಪೂರ್ಣ ಲಸಿಕೆ ಪಡೆದಿರಬೇಕು ಎಂದೂ ಮಾರ್ಗಸೂಚಿಯಲ್ಲಿ ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next