Advertisement

ಮಹಾರಾಷ್ಟ್ರದಲ್ಲಿ ಮಂದಗತಿ ಮತದಾನ; ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ; ಪ್ರಧಾನಿ ಮೋದಿ

09:51 AM Oct 22, 2019 | Team Udayavani |

ಮುಂಬೈ/ಹರ್ಯಾಣ: ಮಹಾರಾಷ್ಟ್ರ, ಹರ್ಯಾಣ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಮತದಾನ ಸೋಮವಾರ ಬೆಳಗ್ಗೆ ಆರಂಭವಾಗಿದ್ದು, ಏತನ್ಮಧ್ಯೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಬಂದು ಮತದಾನ ಮಾಡುವ ಮೂಲಕ ದಾಖಲೆ ಬರೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿಕೊಂಡಿದ್ದಾರೆ.

Advertisement

ಸೋಮವಾರ ಮಹಾರಾಷ್ಟ್ರ, ಹರ್ಯಾಣದಲ್ಲಿ ವಿಧಾನಸಭಾ ಚುನಾವಣೆ, 51 ರಾಜ್ಯಗಳ ಉಪಚುನಾವಣೆ ಹಾಗೂ ಎರಡು ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಮತದಾನ ನಡೆಯುತ್ತಿದೆ. ಪ್ರಜಾಪ್ರಭುತ್ವದ ಹಬ್ಬವನ್ನು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ಜನರು ದಾಖಲೆ ಮಟ್ಟದಲ್ಲಿ ಮತದಾನ ಮಾಡಬೇಕು ಎಂದು ಪ್ರಧಾನಿ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಸೋಮವಾರ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮತದಾನದಲ್ಲಿ 8.87 ಕೋಟಿ ಮತದಾರರು 288 ವಿಧಾನಸಭಾ ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿರುವ 3,237 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಮಹಾರಾಷ್ಟ್ರ, ಹರ್ಯಾಣದಲ್ಲಿ ಬೆಳಗ್ಗೆ 10ಗಂಟೆವರೆಗೆ ಶೇ.6ರಷ್ಟು ಮಾತ್ರ ಮತದಾನವಾಗಿದೆ ಎಂದು ವರದಿ ತಿಳಿಸಿದೆ.

ಹರ್ಯಾಣದಲ್ಲಿ ಶೇ.8.73ರಷ್ಟು, ಮಹಾರಾಷ್ಟ್ರದಲ್ಲಿ ಶೇ.5.69ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿರುವುದಾಗಿ ವರದಿ ವಿವರಿಸಿದೆ. ಹಿರಿಯ ನಾಗರಿಕರಿಗೆ ಮತದಾನ ಮಾಡಲು ಚುನಾವಣಾ ಆಯೋಗ ವಿಶೇಷ ಸೌಲಭ್ಯ ಕಲ್ಪಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next