Advertisement

ಮುಂದುವರಿದ “ಮಹಾ” ಸರ್ಕಾರ ರಚನೆ ಕಸರತ್ತು; ಬಹುತೇಕ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಸಾಧ್ಯತೆ?

09:46 AM Nov 13, 2019 | Nagendra Trasi |

ಮುಂಬೈ/ನವದೆಹಲಿ:ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಮೊದಲಿಗೆ ಬಿಜೆಪಿ, ಬಳಿಕ ಶಿವಸೇನೆ ಈಗ ಎನ್ ಸಿಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್, ಎನ್ ಸಿಪಿ ಹಾಗೂ ಶಿವಸೇನಾದ ಮಾತುಕತೆ ವಿಫಲವಾಗಿದ್ದು, ಬಹುತೇಕ ರಾಷ್ಟ್ರಪತಿ ಆಡಳಿತ ಹೇರಿಕೆ ಸಾಧ್ಯತೆ ದಟ್ಟವಾಗಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

Advertisement

ಮಹಾರಾಷ್ಟ್ರದ ಸರ್ಕಾರ ರಚನೆಗೆ ಸಂಬಂಧಿಸಿದಂತೆ ಮಂಗಳವಾರ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ. ಏತನ್ಮಧ್ಯೆ ಮೈತ್ರಿ ಪಕ್ಷವಾಗಿರುವ ಕಾಂಗ್ರೆಸ್ ಜತೆ ಮಾತುಕತೆ ನಡೆಸಿದ ನಂತರ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಎನ್ ಸಿಪಿ ತಿಳಿಸಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎನ್ ಸಿಪಿ 54 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಸೋಮವಾರ ಸಂಜೆಯೊಳಗೆ ಶಿವಸೇನೆ ತನಗಿರುವ ಶಾಸಕರ ಬೆಂಬಲದ ಪತ್ರವನ್ನು ರಾಜ್ಯಪಾಲರಿಗೆ ನೀಡಬೇಕಾಗಿತ್ತು. ಆದರೆ ಎನ್ ಸಿಪಿ ಮತ್ತು ಕಾಂಗ್ರೆಸ್ ಕಡೆಯಿಂದ ಈ ಪತ್ರಗಳು ಶಿವಸೇನೆಗೆ ತಲುಪದ ಕಾರಣ ಸರ್ಕಾರ ರಚನೆಗೆ ತನಗಿರುವ ಶಾಸಕರ ಬೆಂಬಲದ ಪತ್ರವನ್ನು ನೀಡಲು ಸಾಧ್ಯವಾಗಲಿಲ್ಲ. ಜತೆಗೆ ಪತ್ರ ನೀಡಲು ಇನ್ನೂ ಎರಡು ದಿನ ಸಮಯ ನೀಡುವಂತೆ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಮಾಡಿದ ಮನವಿಯನ್ನೂ ರಾಜ್ಯಪಾಲರು ತಿರಸ್ಕರಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next