ಮಹಾರಾಷ್ಟ್ರ: ಸಾರ್ವಜನಿಕ ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮಹಾರಾಷ್ಟ್ರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೇರಿದಂತೆ ಆರೋಗ್ಯ ಸೇವೆಗಳನ್ನು ರೋಗಿಗಳಿಗೆ ಉಚಿತವಾಗಿ ಲಭ್ಯವಾಗುವಂತೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ವೈದ್ಯಕೀಯ ಪರೀಕ್ಷೆಗಳು, ಚಿಕಿತ್ಸೆ ಮತ್ತು ರಕ್ತ ಪೂರೈಕೆಯನ್ನು ಹೊರತುಪಡಿಸಿ ಸಾರ್ವಜನಿಕ – ಖಾಸಗಿ ಸಹಭಾಗಿತ್ವದಲ್ಲಿ ಒದಗಿಸಲಾದ ಎಲ್ಲಾ ಸೇವೆಗಳು ಆಗಸ್ಟ್ 15 ರಿಂದ ರೋಗಿಗಳಿಗೆ ಉಚಿತವಾಗಿ ಲಭ್ಯವಿದೆ ಎಂದು ಬುಧವಾರ ಹೊರಡಿಸಿದ ಸರ್ಕಾರದ ಆದೇಶದಲ್ಲಿ ತಿಳಿಸಿದೆ.
ಮಹಾರಾಷ್ಟ್ರದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮತ್ತು ಇತರ ಆರೋಗ್ಯ ಸೇವೆಗಳನ್ನು ಒದಗಿಸುವ ನಿರ್ಧಾರವನ್ನು ಆಗಸ್ಟ್ 3 ರಂದು ನಡೆದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಈ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರ ನಡೆಸುತ್ತಿರುವ 2,418 ಆಸ್ಪತ್ರೆಗಳು ಮತ್ತು ವೈದ್ಯಕೀಯ ಕೇಂದ್ರಗಳಲ್ಲಿ ಉಚಿತ ಸೌಲಭ್ಯಗಳು ಲಭ್ಯವಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
25.5 ಮಿಲಿಯನ್‌ಗಿಂತಲೂ ಹೆಚ್ಚು ಜನರು ಈ ಸೌಲಭ್ಯಗಳಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: Chandrayan-3 ಲ್ಯಾಂಡಿಂಗ್ ವಿಕ್ರಮ ಐತಿಹಾಸಿಕ ಸಾಧನೆ: ಮುಖ್ಯಮಂತ್ರಿ ಸಿದ್ದರಾಮಯ್ಯ